Home ತಾಜಾ ಸುದ್ದಿ ಕಟೀಲಿನಲ್ಲಿ ಸೀರೆ ಹರಕೆ ತೀರಿಸಿದ ಶಿಲ್ಪಾ ಶೆಟ್ಟಿ

ಕಟೀಲಿನಲ್ಲಿ ಸೀರೆ ಹರಕೆ ತೀರಿಸಿದ ಶಿಲ್ಪಾ ಶೆಟ್ಟಿ

0

ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಖ್ಯಾತ ಚಿತ್ರನಟಿ ಶಿಲ್ಪಾ ಶೆಟ್ಟಿ. ಪತಿ ರಾಜ್ ಕುಂದ್ರಾ. ಮಕ್ಕಳು. ಸಹೋದರಿ ನಟಿ ಶಮಿತಾ ಶೆಟ್ಟಿ. ಶಿಲ್ಪಾ ಶೆಟ್ಟಿಯವರ ತಾಯಿ ಭೇಟಿ ನೀಡಿ ಸೇವೆ ಸಲ್ಲಿಸಿದರು.
ಹೆಣ್ನು ಮಗುವಿಗಾಗಿ ಹರಕೆ ಹೊತ್ತುಕೊಂಡಿದ್ದ ಶಿಲ್ಪಾ ಶೆಟ್ಟಿ ದಂಪತಿ ಸೀರೆ ಹರಕೆ ಒಪ್ಪಿಸಿದರು. ಮೊಕ್ತೇಸರ ವಾಸುದೇವ ಆಸ್ರಣ್ಣ ಪ್ರಸಾದ ನೀಡಿದರು. ಅರ್ಚಕರಾದ ಅನಂತ ಆಸ್ರಣ್ಣ ಶ್ರೀಹರಿ ಆಸ್ರಣ್ಣ ವಕೀಲ ರವಿ ಪೂಜಾರಿ. ಉಪಸ್ಥಿತರಿದ್ದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೇಗುಲದ ನಾಗಸ್ವರ ವಾದಕರಾದ ಲಿಂಗಪ್ಪ ಸೇರಿಗಾರರ ವಾದ್ಯವಾದನವನ್ನು ಆಲಿಸಿದ ಶಿಲ್ಪಾ ಶೆಟ್ಟಿ ಹಾಗೂ ಶಮಿತಾ ಶೆಟ್ಟಿ ಕಟೀಲು ರಥಬೀದಿಯಲ್ಲಿ ನಡೆಯುತ್ತಿದ್ದ ಯಕ್ಷಗಾನವನ್ನು ಕೆಲಹೊತ್ತು ವೀಕ್ಷಿಸಿ. ವೇಷಗಳ ಪೋಟೋ ತೆಗೆದು ಸಂಭ್ರಮಿಸಿದರು.

Exit mobile version