ಮಂಡ್ಯ: ದೇಶದಲ್ಲಿ ಹಾಗೂ ರಾಜ್ಯದಲ್ಲಿ ಮತ್ತೆ ಕಮಲ ಅರಳುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಂದ ಬೇಸತ್ತಿದ್ದಾರೆ. ಈಗಾಗಲೇ ಮಂಡ್ಯದಲ್ಲಿ ನಾವು ಖಾತೆ ತೆರೆದಿದ್ದೇವೆ. ಈ ಖಾತೆಗೆ ಇನ್ನಷ್ಟು ಸೇರ್ಪಡೆ ಮಾಡುವ ಕೆಲಸ ಮಾಡುತ್ತೇವೆ. ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ಇನ್ನೂ ಮಾಡುತ್ತಿದ್ದೇವೆ. ಯಾರೇ ಏನೇ ಮಾಡಿದರೂ ಇಲ್ಲಿ ಕಮಲ ಅರಳುವು ಖಚಿತ. ಜನರಿಗೆ ಎಲ್ಲವೂ ತಿಳಿದಿದೆ ಎಂದರು. ಇನ್ನು ಕೇಂದ್ರ ಸಚಿವ ಅಮಿತ್ ಶಾ ಬಳಿಕ ಮೋದಿ ನಗರಕ್ಕೆ ಆಗಮಿಸಲಿದ್ದು, ಮಾರ್ಚ್ ಮೊದಲ ಅಥವಾ ಎರಡನೇ ವಾರದಲ್ಲಿ ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದರು.