ಕಮಲ ತೊರೆದ ಬಿಎಸ್‌ವೈ ಆಪ್ತ ಲಿಂಬಿಕಾಯಿ

0
13
ಮೋಹನ ಲಿಂಬಿಕಾಯಿ

ಹುಬ್ಬಳ್ಳಿ: ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಪ್ತರಾಗಿದ್ದ ಮೋಹನ ಲಿಂಬಿಕಾಯಿ ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ
ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಕಾನೂನು ಸಲಹೆಗಾರರಾಗಿದ್ದ ಅವರು ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ನಡೆಯುತ್ತಿರುವಾಗಲೇ ಕಮಲ ಪಾಳಯವನ್ನು ತೊರೆದಿರುವುದು ರಾಜಕೀಯವಾಗಿ ಗಮನಾರ್ಹ ವಿದ್ಯಮಾನ.
ಪ್ರಬಲ ಪಂಚಮಸಾಲಿ ಸಮುದಾಯಕ್ಕೆ ಸೇರಿರುವ ಮೋಹನ ಲಿಂಬಿಕಾಯಿ ಹುಬ್ಬಳ್ಳಿ-ಧಾರವಾಡ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಆದರೆ, ಕೆಲ ದಿನಗಳಿಂದ ಬಿಜೆಪಿಯಿಂದ ಅಂತರ ಕಾಪಾಡಿಕೊಳ್ಳುತ್ತಿದ್ದ ಲಿಂಬಿಕಾಯಿ, ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಗುಲ್ಲು ಕಳೆದ ಎರಡು ತಿಂಗಳಿಂದ ಜೋರಾಗಿತ್ತು. ಅದೀಗ ನಿಜವಾಗಿದೆ.

Previous article‘ಕಬ್ಜ’ ಬಿಡುಗಡೆ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ
Next articleಪರ್ತಕರ್ತನ ಮೇಲೆ ದರ್ಪ: ಇನ್‌ಸ್ಪೆಕ್ಟರ್ ವಿರುದ್ಧ ಪ್ರತಿಭಟನೆ