ಕರಾವಳಿ: 18ರ ಬದಲಿಗೆ 19ರಂದು ಸಾರ್ವತ್ರಿಕ ರಜೆ

0
14

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ಚೌತಿ ಹಬ್ಬಕ್ಕೆ ಸೆ.೧೮ರ ಬದಲಿಗೆ ಸೆ.೧೯ ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಸೆ.೧೯ರಂದು ಚೌತಿ ಹಬ್ಬ ಆಚರಿಸುವುದರಿಂದ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮನವಿಯ ಮೇರೆಗೆ ಸೆ.೧೯ರಂದು ರಜೆ ಘೋಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ದ.ಕ. ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದರು.
ಇದೀಗ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗೆ ಅನ್ವಯಿಸುವಂತೆ ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಸ್ಥಳೀಯ ಪರಿಸ್ಥಿತಿಗಳಿಗನುಸಾರವಾಗಿ ಸೆ.೧೮ರ ಬದಲಿಗೆ ಸೆ.೧೯ರಂದು ಸಾರ್ವತ್ರಿಕ ರಜೆ ಘೋಷಿಸಲು ಜಿಲ್ಲಾಧಿಕಾರಿಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಪಿ. ನಾಗಪ್ರಶಾಂತ್ ನಿರ್ದೇಶಿಸಿದ್ದಾರೆ.

Previous articleಕಾವೇರಿ ವಿಚಾರದಲ್ಲಿ ಮಾತು ಬದಲಾಯಿಸುತ್ತಿರುವ ಊಸರವಳ್ಳಿ ಸರ್ಕಾರ
Next articleಹಣ ಪಡೆದು ಟಿಕೆಟ್ ನೀಡುವ ಸಂಸ್ಕ್ರತಿ ಬಿಜೆಪಿಯಲ್ಲಿಲ್ಲ