ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ: ಡಿಕೆ ಶಿವಕುಮಾರ್‌ ಏಕೈಕ ಡಿಸಿಎಂ

0
17

ನವದೆಹಲಿ: ಕರ್ನಾಟಕ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಎಂದು ರಣದೀಪ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್​​ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ, ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕದ ಗೆಲುವಿನ ಶ್ರೇಯಸ್ಸು ಸೋನಿಯಾ ಗಾಂಧಿ, ಪ್ರಿಯಾಂಕಾ ಗಅಂಧಿ, ರಾಹುಲ್ ಗಾಂಧಿ ಸೇರಿ ಎಲ್ಲ ಹಿರಿಯ ನಾಯಕರಿಗೂ ಸಲ್ಲುತ್ತದೆ. ಭಾರತ್ ಜೋಡೋ ಪಾದಯಾತ್ರೆ ಬಳಿಕ ಕಾಂಗ್ರೆಸ್ ಗೆದ್ದಿದೆ. ಕರ್ನಾಟಕದಲ್ಲಿ ಅನುಭವಿ, ಸಮರ್ಥ ಕಾಂಗ್ರೆಸ್ ನಾಯಕರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷವನ್ನು ಸಂಘಟಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರೂ ಸಮರ್ಥ ನಾಯಕರು ಎಂದರು. ಕರ್ನಾಟಕ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಅಧಿಕಾರವಹಿಸಿಕೊಳ್ಳಲಿದ್ದಾರೆ ಎಂದು ಕೆ.ಸಿ.ವೇಣುಗೋಪಾಲ್ ಘೋಷಿಸಿದ್ದಾರೆ. ಮೇ 20ರಂದು ಸಿದ್ದರಾಮಯ್ಯ, ಡಿಕೆಶಿ ಪ್ರಮಾಣವಚನ ಸ್ವೀಕರಿಸುತ್ತಾರೆ.ಮಧ್ಯಾಹ್ನ ಪದಗ್ರಹಣ ಸಮಾರಂಭ ನಡೆಯಲಿದೆ ಎಂದರು.

Previous articleಬಾಯಲ್ಲಿ ಶಸ್ತ್ರ-ಕೈಯಲ್ಲಿ ಶಾಸ್ತ್ರದ ಪರಾಕ್ರಮ
Next articleಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು