ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಪಟ್ಟಿ ಪ್ರಕಟ

0
17
BJP

ಹೊಸದಿಲ್ಲಿ: ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಜೂನ್ 13 ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ತನ್ನ ಪಾಲಿನ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ.
ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ. ಹೀಗಾಗಿ ಇಂದು ಬಿಜೆಪಿ ಹೈಕಮಾಂಡ್ ಅಂತಿಮವಾಗಿ ತನ್ನ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು,
ಮಾಜಿ ಸಚಿವ ಸಿ.ಟಿ.ರವಿ, ಪರಿಷತ್ತಿನಲ್ಲಿ ವಿರೋಧ ಮುಖ್ಯಸಚೇತಕರಾಗಿರುವ ಎನ್.ರವಿಕುಮಾರ್ ಹಾಗೂ ಮರಾಠ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಂ.ಜಿ.ಮುಳೆ ಎಂಬವರನ್ನು ಬಿಜೆಪಿ ಕಣಕ್ಕಿಳಿಸಿದೆ.

Previous articleಸೋಸಲೆ ಶ್ರೀ ವ್ಯಾಸರಾಜ ಮಠದ ಸುಧಾಮಂಗಳ ಮಹೋತ್ಸವ
Next articleಕೊಪ್ಪಳ ವಿಶ್ವವಿದ್ಯಾಲಯ ಸಿಂಡಿಕೇಟ್ ಪ್ರಾಧಿಕಾರ ಸದಸ್ಯರಾಗಿ ತಿಪ್ಪಾಶೆಟ್ಟಿ ಆಯ್ಕೆ