ಕಲಬುರಗಿಯಲ್ಲಿ ಎರಡು ಕಡೆ ಲೋಕ ದಾಳಿ

0
15

ಕಲಬುರಗಿ: ಕಲಬುರಗಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಲ್ಲಿ ನಡುಕ ಮೂಡಿಸಿದ್ದಾರೆ.
ಬೀದರ ವಲಯ ಅರಣ್ಯಾಧಿಕಾರಿ ಬಸವರಾಜ್ ಡಾಂಗೆ ಮನೆ, ಬಸವರಾಜ್ ಡಾಂಗೆ ಅವರ ಕಲಬುರಗಿಯ ಮಾಕಾ ಲೇಔಟ್ ನಲ್ಲಿರುವ ಮನೆ, ದೇವದುರ್ಗದ KBJNL ಇಇ ತಿಪ್ಪಣ್ಣ ಅನ್ನದಾನಿ ಮನೆ ಮೇಲೂ ದಾಳಿ ಮಾಡಲಾಗಿದೆ.
ತಿಪ್ಪಣ್ಣ ಅನ್ನದಾನಿ, ಅವರ ಕಲಬುರಗಿಯ ಭಾಗ್ಯವಂತಿ ನಗರದ ಮನೆ ಮೇಲೆ ದಾಳಿ ನಡೆದಿದ್ದು, ಮಹತ್ವದ ದಾಖಲೆ ಪರಿಶೀಲಿಸಲಾಗುತ್ತಿದೆ. ಲೋಕಾಯುಕ್ತ ಎಸ್ಪಿ ಎಸ್.ಎಸ್.ಕರ್ನೂಲ್ ನೇತೃತ್ವದಲ್ಲಿ ಬೃಷ್ಟ ಅಧಿಕಾರಿಗಳ ಬೇಟೆ ಮುಂದುವರಿದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆಯ ಆರೋಪ ಹಿನ್ನಲೆ ಅಧಿಕಾರಿಗಳ ಮನೆ ತಲಾಶಗಿಳಿದ ಲೋಕಾಯುಕ್ತ ಅಧಿಕಾರಿಗಳು ಬಿಡುಬಿಟ್ಟು ಶೋಧ ಕಾರ್ಯ ಮುಂದುವರಿಸಿದ್ದಾರೆ.

Previous articleಪದಾರ್ಥ ಮತ್ತು ಪ್ರಸಾದ
Next articleಚಿತ್ರದುರ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ