ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ. ಪರಿಹಾರ ಜೊತೆಗೆ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದ್ದಾರೆ.
ಚಿತ್ರದುರ್ಗದ ಕವಾಡಿಗರಹಟ್ಟಿ ಬಡಾವಣೆಗೆ ಭೇಟಿ ನೀಡಿ ಆಸ್ಪತ್ರೆಗೆ ತೆರಳಿ ಅಸ್ವಸ್ಥರಾಗಿದ್ದ ಜನರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದ ಹಲವೆಡೆ ಈ ರೀತಿಯ ಪ್ರಕರಣ ನಡೆದಿವೆ. ರಾಜ್ಯ ಸರ್ಕಾರ ಈವರೆಗೆ ಎಚ್ಚೆತ್ತುಕೊಂಡಿಲ್ಲ. ಸಾವಿನ ಬಳಿಕ ಪರಿಹಾರ ಕೊಡುವುದು ಒಂದು ಭಾಗ. ಈ ರೀತಿಯ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಸಾವು ಸಂಭವಿಸುವವರೆಗೆ ಗಂಭೀರವಾಗಿ ಪರಿಗಣಿಸದಿರುವ ಮಾನಸಿಕತೆ ಒಳ್ಳೆಯದಲ್ಲ ಎಂದರು. ಮಾಜಿ ಸಚಿವ ಬಿ.ಸಿ. ನಾಗೇಶ್, ಮಾಜಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ಎಂಎಲ್‌ಸಿ ಕೆ.ಎಸ್. ನವೀನ್ ಅವರೊಂದಿಗಿದ್ದರು.
ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ದರಿದ್ರ ಬಂದಿಲ್ಲ ಎಂದು ಹೆಚ್.ಡಿ. ಕುಮಾರಸ್ವಾಮಿಯವರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಆ ದರಿದ್ರ ಅವರಿಗೆ ಬರೋದು ಬೇಡ, ಅದು ಒಳ್ಳೆಯದೂ ಅಲ್ಲ ಎಂದರು.
Home ನಮ್ಮ ಜಿಲ್ಲೆ ಚಿತ್ರದುರ್ಗ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ., ಸರಕಾರಿ ನೌಕರಿ ಕೊಡಿ