Home ತಾಜಾ ಸುದ್ದಿ ಕಲುಷಿತ ನೀರು ಸೇವಿಸಿ 30ಜನ ಅಸ್ವಸ್ಥ: ಒರ್ವ ಬಾಲಕ ಸಾವು

ಕಲುಷಿತ ನೀರು ಸೇವಿಸಿ 30ಜನ ಅಸ್ವಸ್ಥ: ಒರ್ವ ಬಾಲಕ ಸಾವು

0

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ಜನ ತೀವ್ರ ಅಸ್ವಸ್ಥರಾಗಿದ್ದು, ಒರ್ವ ಬಾಲಕ ಸಾವನಪ್ಪಿರುವ ಘಟನೆ ನಡೆದಿದೆ. ಮೃತಪಟ್ಟ ಬಾಲಕ ಹನುಮೇಶ ಈರಪ್ಪ(5) ಎಂದು ಗುರುತಿಸಲಾಗಿದೆ.
ಅಸ್ವಸ್ಥರನ್ನು ಅರಕೇರಾ, ದೇವದುರ್ಗ ಹಾಗೂ ರಾಯಚೂರಿನ ರಿಮ್ಸ್ ಆಸ್ಪತ್ರೆಗಳಲ್ಲಿ ದಾಖಲು ಮಾಡಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮ ಪಂಚಾಯತಿ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ದಿನಗಳಿಂದ ಗ್ರಾಮಸ್ಥರು ಅಸ್ವಸ್ಥಗೊಳ್ಳುತ್ತಿದ್ದಾರೆ ಎನ್ನಲಾಗಿದೆ. ಸದ್ಯ ಪರ್ಯಾಯ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ರೇಕಲಮರಡಿ ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Exit mobile version