ಕಲ್ಯಾಣ ಭಾಗದಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ, ಎಂದಿನಂತೆ ಜನಜೀವನ

0
23
ಕಲಬುರಗಿಯಲ್ಲಿ ಇಂದು ಕನ್ನಡಪರ ಸಂಘಟನೆಗಳ ಮುಖಂಡರು ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ವಿರೋಧಿಸಿ ಅರೆಬೆತ್ತಲೆ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು

ಕಲಬುರಗಿ: ತಮಿಳುನಾಡಿಗೆ ಕಾವೇರಿ ನೀರು ಬಿಟ್ಡಿರುವುದನ್ನು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಇಂದು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಕಲ್ಯಾಣ ಕರ್ನಾಟಕದ ನಾಲ್ಕು ಜಿಲ್ಲೆಗಳಾದ ಕಲಬುರಗಿ, ಬೀದರ್, ಯಾದಗಿರಿ‌ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಾಲ್ಕು ಜಿಲ್ಲೆಗಳಲ್ಲಿ ಎಂದಿನಂತೆ ಜನಜೀವನ ನಡೆಯಿತು. ಬಸ್, ಆಟೋಗಳ ಸಂಚಾರ ಎಂದಿನಂತೆ ಇದ್ದು, ಅಂಗಡಿ ಮುಗ್ಗಟ್ಟುಗಳಲ್ಲಿ ವ್ಯಾಪಾರ ವಹಿವಾಟು ನಡೆದವು. ಎಲ್ಲಾ ಶಾಲಾ ಕಾಲೇಜುಗಳ ಎಂದಿನಂತೆ ನಡೆದವು.
ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿ, ಮನವಿ ಪತ್ರವನ್ನು ಸಲ್ಲಿಸಿದರು.
ಕಲಬುರ್ಗಿಯಲ್ಲಿ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕನ್ನಡಪರ ಸಂಘಟನೆಗಳ ಮುಖಂಡರು ನಗರದಲ್ಲಿನ ತಮಿಳುನಾಡಿನ ಬ್ಯಾಂಕಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಪೊಲೀಸರು ಅವರನ್ನು ಮಾರ್ಗಮಧ್ಯೆ ಬಂಧಿಸಿದರು. ರೈತ ಮುಖಂಡರು ಪ್ರತಿಭಟನೆ ನಡೆಸಿದರು.

Previous articleಚಿತ್ರದುರ್ಗ ಜಿಲ್ಲೆಯಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Next articleಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ, ಪ್ರತಿಭಟನೆಗೆ ಸೀಮೀತವಾದ ಬಂದ್