Home ತಾಜಾ ಸುದ್ದಿ ಕಳಪೆ ಮೊಟ್ಟೆ ಪೂರೈಕೆ ಮಾಡಿದರೆ ಕಪ್ಪು ಪಟ್ಟಿಗೆ

ಕಳಪೆ ಮೊಟ್ಟೆ ಪೂರೈಕೆ ಮಾಡಿದರೆ ಕಪ್ಪು ಪಟ್ಟಿಗೆ

0

ಬೆಂಗಳೂರು: ಕಳಪೆ ಮೊಟ್ಟೆ ಪೂರೈಕೆ ಮಾಡಿದರೆ ಕಪ್ಪು ಪಟ್ಟಿಗೆ ಸೇರಿಸುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಮೊಟ್ಟೆ ವಿತರಕರಿಗೆ ಖಡಕ್ ಸೂಚನೆಯನ್ನು ನೀಡಿದ್ದು. ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಮೊಟ್ಟೆ ಪೂರೈಕೆ ಕುರಿತು ಮಾಧ್ಯಮಗಳ ವರದಿಯ ಹಿನ್ನೆಲೆಯಲ್ಲಿ ಇವತ್ತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದೇನೆ. ಯಾರು ಕಳಪೆ ಮೊಟ್ಟೆ ಪೂರೈಕೆ ಮಾಡುತ್ತಾರೆ ಅವರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದು , ಸಪ್ಲೈ ಲಿಸ್ಟ್ ನಿಂದಲೂ ಕೈ ಬಿಡುವಂತೆ ಸೂಚನೆ ನೀಡಿದ್ದೇನೆ.
ಖರೀದಿ ವಿಕೇಂದ್ರೀಕರಣ ಮಾಡಿದ ಕಾರಣದಿಂದ ಗ್ರಾಮ ಪಂಚಾಯತಿ ಮಟ್ಟದಲ್ಲೂ ಮೊಟ್ಟೆ ಖರೀದಿ ಆಗುತ್ತಿದೆ. ಯಾವುದೇ ಕಂಟ್ರೋಲ್ ಇಲ್ಲದೆ ಖರೀದಿ ನಡೆಯುತ್ತಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು ಎಂಬುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಖ್ಯ ಉದ್ದೇಶವಾಗಿದೆ.
ಕಳಪೆ ಮೊಟ್ಟೆ ವಿತರಣೆ ವಿಚಾರ ಕ್ಯಾಬಿನೆಟ್‌ನಲ್ಲಿ ಪ್ರಸ್ತಾಪ ಮಾಡುತ್ತೇನೆ. ವಿಕೇಂದ್ರೀಕರಣ ಮಾದರಿಯ ಖರೀದಿಯಿಂದ ಪ್ರಾಮಾಣಿಕ ಪೂರೈಕೆ ಆಗ್ತಿಲ್ಲ. ಈ ನಿಟ್ಟಿನಲ್ಲಿ ಖರೀದಿ ವ್ಯವಸ್ಥೆ ಕೇಂದ್ರೀಕರಣ ಮಾಡಲು ಕ್ರಮವಹಿಸಲಾಗುವುದು. ಜತೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಿ ಮೊಟ್ಟೆ ವಿತರಣೆ ಕುರಿತು ನಿಗಾವಹಿಸುವುದಾಗಿ ತಿಳಿಸಿದೆ. ಸರ್ಕಾರದ ಸಂಸ್ಥೆಗಳಿಂದ ಖರೀದಿಗೆ ಚಿಂತನೆ ನಡೆಯುತ್ತಿದ್ದು, ಎಲ್ಲಾ ಪ್ರಸ್ತಾಪಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ.

Exit mobile version