ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಸಂಸದರಿಗೆ ಅಭಿನಂದನೆಗಳು ಸಲ್ಲಿಸಿ ಸಚಿವ ಎಂ. ಬಿ. ಪಾಟೀಲ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಕರ್ನಾಟಕದಲ್ಲಿ ನಿರೀಕ್ಷಿತ ಸ್ಥಾನಗಳಲ್ಲಿ ಗೆಲುವು ಸಾಧಿಸಿಲ್ಲದೇ ಹೋದರು ಕಳೆದ ಬಾರಿಗಿಂತಲೂ ಉತ್ತಮ ಸಾಧನೆ ಮಾಡಿರುವುದು ಸಮಾಧಾನ ತಂದಿದೆ.
ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಎಲ್ಲ ಒಂಬತ್ತು ಸಂಸದರಿಗೆ ಹೃತ್ಪೂರ್ವಕ ಅಭಿನಂದನೆಗಳು. ನೂತನ ಸಂಸದರು ರಾಜ್ಯದ ಧ್ವನಿಯಾಗಿ ಸಂಸತ್ ನಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಾರೆಂಬ ವಿಶ್ವಾಸವಿದೆ.
ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಸಮರ್ಪಣಾ ಮನೋಭಾವದಿಂದ ಶ್ರಮಿಸಿದ ನಾಯಕರು, ಜನಪ್ರತಿನಿಧಿಗಳು, ಕಾರ್ಯಕರ್ತರು ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
ಮತದಾರರು ನೀಡಿದ ತೀರ್ಪನ್ನು ಗೌರವಿಸುತ್ತೇನೆ ಎಂದಿದ್ದಾರೆ.

























