Home ತಾಜಾ ಸುದ್ದಿ ಕವಿವ ಸಂಘದ ಬೇಡಿಕೆ ಈಡೇರಿಸಿ

ಕವಿವ ಸಂಘದ ಬೇಡಿಕೆ ಈಡೇರಿಸಿ

0

ಧಾರವಾಡ: ಕವಿವ ಸಂಘ ನೀಡಿದ ಎಲ್ಲ ಬೇಡಿಕೆ ಈಡೇರಿಸುವ ಆಶಯ ಇದೆ. ಇದಕ್ಕೆ ಸಂಬಂಧಿಸಿದಂತೆ ಸಿಎಂ ಜೊತೆ ಚರ್ಚೆ ಮಾಡಲಾಗುವುದು. ಎಲ್ಲರೂ ತೃಪ್ತಿ ಪಡುವಂತ ಅನುದಾನ ಒದಗಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಭರವಸೆ ನೀಡಿದರು.
ಕವಿವ ಸಂಘದ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿ, ಸಂಘದ ಬೇಡಿಕೆ ಪ್ರಸ್ತುತವಾಗಿವೆ. ಇವುಗಳನ್ನು ಒಮ್ಮೆಗೆ ಆಗದಿದ್ದರೂ ಹಂತ ಹಂತವಾಗಿ ಈಡೇರಿಸುತ್ತೇನೆ. ನಾನೂ ಸಂಘದ ಸದಸ್ಯನಾಗಿ ಕೆಲಸ ಮಾಡುತ್ತೇನೆ ಎಂದರು.
ಸಂಘದ ಕಾರ್ಯದರ್ಶಿ ಶಂಕರ ಹಲಗತ್ತಿ ಮಾತನಾಡಿ, ಸಂಘದ ಅನುದಾನ, ಸಂಘಕ್ಕೆ ಐದು ಎಕರೆ ಭೂಮಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಪತ್ರವನ್ನು ಸಂಘದ ಪರವಾಗಿ ಸಚಿವರಿಗೆ ಸಲ್ಲಿಸಿದರು.
ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಉಪಾಧ್ಯಕ್ಷೆ ಮಾಲತಿ ಪಟ್ಟಣಶೆಟ್ಟಿ, ಶಂಕರ ಕುಂಬಿ, ಬಸವಪ್ರಭು ಹೊಸಕೇರಿ, ವಿಶ್ವೇಶ್ವರಿ ಹಿರೇಮಠ, ಶಿವಾನಂದ ಭಾವಿಕಟ್ಟಿ ಸೇರಿದಂತೆ ಸಂಘದ ಪದಾಧಿಕಾರಿಗಳು ಇದ್ದರು.

Exit mobile version