Home News ಕಾಂಗ್ರೆಸ್‌ಗೆ ಅಡ್ರೆಸ್‌ ಇಲ್ಲದಂತಾಗಿದೆ: ಬಿಎಸ್‌ವೈ

ಕಾಂಗ್ರೆಸ್‌ಗೆ ಅಡ್ರೆಸ್‌ ಇಲ್ಲದಂತಾಗಿದೆ: ಬಿಎಸ್‌ವೈ

ಯಡಿಯೂರಪ್ಪ

ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆದಿರುವ ಕಾಂಗ್ರೆಸ್‌ನ ಭಾರತ್‌ ಜೋಡೋ ಪಾದಯಾತ್ರೆಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ. ಇದರಿಂದ ವಿಧಾನಸಭೆ ಚುನಾವಣೆಯಲ್ಲಿ ಯಾವ ಪರಿಣಾಮವೂ ಬೀರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ರಾಮನಗರ ಜಿಲ್ಲೆಯ ಹರಿಸಂದ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡೀ ದೇಶದಲ್ಲಿ ಕಾಂಗ್ರೆಸ್‌ಗೆ ಅಡ್ರೆಸ್‌ ಇಲ್ಲದಂತಾಗಿದೆ. ಕರ್ನಾಟಕ ಸೇರಿ ಎಲ್ಲೋ ಒಂದೆರಡು ಕಡೆ ಮಾತ್ರ ಕಾಂಗ್ರೆಸ್ ಉಸಿರಾಡುತ್ತಿದೆ. ಇಲ್ಲಿಯೂ ಮುಂದೆ ಅಧಿಕಾರಕ್ಕೆ ಬರುವುದಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಟಿಪ್ಪು ಎಕ್ಸ್‌ಪ್ರೆಸ್ ಹೆಸರು ಬದಲಾವಣೆಯನ್ನು ಇಡೀ ದೇಶವೇ ಸ್ವಾಗತ ಮಾಡಿದೆ. ಹೆಸರು ಬದಲಾವಣೆ ಮಾಡಿರುವುದರ ಬಗ್ಗೆ ಯಾರಿಗೂ ಬೇಸರ ಇಲ್ಲ ಎಂದರು.

Exit mobile version