ಕಾಂಗ್ರೆಸ್​ನ ಹಿರಿಯ ನಾಯಕ, ಮಾಜಿ ಶಾಸಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ನಿಧನ

0
40

ಕೋಲಾರ: ಕಾಂಗ್ರೆಸ್​ನ ಹಿರಿಯ ಮುಖಂಡ ಹಾಗೂ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶುಕ್ರವಾರ ರಾತ್ರಿ ಸಿ.ವೆಂಕಟೇಶಪ್ಪ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋಲಾರದ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
1978, 1983, 1999 ರಲ್ಲಿ ಮೂರು ಬಾರಿ ಶಾಸಕರಾಗಿದ್ದರು. ಸಿ. ವೆಂಕಟೇಶಪ್ಪ ಅವರಿಗೆ 73 ವರ್ಷ ವಯಸ್ಸಾಗಿತ್ತು.

Previous articleಯುವಕನ ಕೊಚ್ಚಿ ಕೊಲೆ
Next articleಸೋಲಾರ್ ವಿಸ್ತರಣೆಗಿಂತ ಜಲ ಶಾಖೋತ್ಪನ್ನಕ್ಕೆ ಆದ್ಯತೆ ಇರಲಿ