Home ತಾಜಾ ಸುದ್ದಿ ಕಾಂಗ್ರೆಸ್ ಕರ್ನಾಟಕವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಿದೆ

ಕಾಂಗ್ರೆಸ್ ಕರ್ನಾಟಕವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಿದೆ

0

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಕರ್ನಾಟಕ ರಾಜ್ಯವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಿದೆ. ಎಂದು ಮಾಜಿ ಸಚಿವ ಆರ್‌ ಅಶೋಕ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ಆರ್.ಅಶೋಕ್ ಅವರು
ಬಿಜೆಪಿ ಜಾರಿಗೊಳಿಸಿರುವ ಜನಹಿತ ಕಾಯ್ದೆಗಳನ್ನು ರದ್ದುಗೊಳಿಸುವ ಮೂಲಕ ಪಿಎಫ್‌ಐ, ಎಸ್‌ಡಿಪಿಐನಂತಹ ಮತಾಂಧ ಸಂಘಟನೆಗಳ ತಾಳಕ್ಕೆ ಕಾಂಗ್ರೆಸ್‌ ಸರ್ಕಾರ ಕುಣಿಯುತ್ತಿದೆ. ನಾವು ಅಧಿಕಾರದಲ್ಲಿದ್ದಾಗ ಈ ಕಾಯ್ದೆ ಜಾರಿಗೆ ತಂದಿದ್ದೆವು. ಆಗ ಪಿಎಫ್ಐ ಅಂತಹವರು ಬಿಟ್ಟು ಬೇರೆ ಯಾರೂ ವಿರೋಧ ಮಾಡಿಲ್ಲ. ಕಾಯ್ದೆ ವಾಪಸ್ ಪಡೆಯದಂತೆ ಬಿಜೆಪಿ ಆಗ್ರಹಿಸುತ್ತದೆ ಎಂದು ತಿಳಿಸಿದರು.

Exit mobile version