Home ತಾಜಾ ಸುದ್ದಿ ಕಾಂಗ್ರೆಸ್ ಗ್ಯಾರಂಟಿ ಘೋಷಣೆಯಿಂದ ಬಿಜೆಪಿಗೆ ಆತಂಕ

ಕಾಂಗ್ರೆಸ್ ಗ್ಯಾರಂಟಿ ಘೋಷಣೆಯಿಂದ ಬಿಜೆಪಿಗೆ ಆತಂಕ

0

ಬೆಳಗಾವಿ: ಜನರ ಕಲ್ಯಾಣಕ್ಕಾಗಿ ಕಾಂಗ್ರೆಸ್‌ ಪಕ್ಷ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಇದನ್ನು ನೋಡಿದ ಬಿಜೆಪಿಗೆ ಆತಂಕ ಶುರುವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಜಾರಿಗೆ ತಂದ ಘೋಷಣೆಗಳನ್ನು ಜನರು ಹೃದಯಪೂರ್ವಕವಾಗಿ ಸ್ವಾಗತ ಮಾಡುತ್ತಿದ್ದಾರೆ. ಈ ವಿಷಯನ್ನು ಮರೆ ಮಾಚಲು ಬಿಜೆಪಿಯವರು ಬೇರೆ ಅಸ್ತ್ರ ಹೂಡುತ್ತಿದ್ದಾರೆ. ಇವರ ಬಯಕೆ ಎಂದು ಈಡೇರದು ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.
ಗಲಾಟೆ ಮಾಡಿಸುವುದೇ ಬಿಜೆಪಿ ಕೆಲಸ: ಅಭಿವೃದ್ಧಿ ಬಗ್ಗೆ ಬಿಜೆಪಿಯವರಿಗೆ ಏನು ಗೊತ್ತಲ್ಲ. ಮುಖ್ಯವಾಗಿ ಬಿಜೆಪಿಯವರಿಗೆ ಗೊತ್ತಿರುವುದು ಕೋಮು ಗಲಭೆ ಹಾಗೂ ಗಲಾಟೆ ಮಾಡಿಸುವುದು ಇವರ ನಿತ್ಯ ಕಾಯಕವಾಗಿದೆ. ಸೋತು ಸುಣ್ಣವಾಗಿರುವ ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಆದ್ದರಿಂದ ಇಂತಹ ಇಲ್ಲ ಸಲ್ಲದ ಹೇಳಿಕೆಗಳನ್ನು ಮೇಲೆತ್ತಿ ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಆರೋಪಿಸಿದರು.
ವಿಮಾನ ಸಂಪರ್ಕ ಕಡಿತಗೊಳಿಸಿದ ಕಮಲ: ಬೆಳಗಾವಿಗೆ ಬರಬೇಕಿದ್ದ ಯೋಜನೆಗಳು ಹುಬ್ಬಳ್ಳಿ-ಧಾರವಾಡಕ್ಕೆ ಹೋಗುತ್ತಿವೆ ಎನ್ನುವ ಆರೋಪಕ್ಕೆ ಉತ್ತರಿಸಿದ ಅವರು, ನಮ್ಮ ಎಲ್ಲ ವಿಮಾನಗಳು ಹುಬ್ಬಳ್ಳಿಗೆ ಹೋಗಿವೆ. ದೆಹಲಿಗೆ ಸಾಕಷ್ಟು ಜನ ಪ್ರಯಾಣ ಬೆಳೆಸುತ್ತಿದ್ದರು. ಆದರೆ ಬಿಜೆಪಿಯ ಮಂತ್ರಿಯರು ವಿಮಾನ ಹುಬ್ಬಳ್ಳಿಗೆ ಹೋಗಲು ಕಾರಣರಾಗಿದ್ದಾರೆ. ಮುಂದಿನ ದಿನಗಲ್ಲಿ ಬೆಳಗಾವಿಯಲ್ಲಿ ಇನ್ನೂ ಹೆಚ್ಚಿನ ವಿಮಾನ ತರುವ ಪ್ರಯತ್ನ ಮಾಡಲಾಗುವುದು ಶೀಘ್ರದಲ್ಲಿಯೇ ಸಭೆ ಕರೆಯಲಾಗುವುದು ಎಂದರು.