ವಿಜಯಪುರ: ಸಿದ್ದರಾಮಯ್ಯ ಅವರು ಪ್ರವಾಸ ಮಾಡುತ್ತಿರುವ ಭಾಗದ ಶಾಸಕರನ್ನು ಗಟ್ಟಿಯಾಗಿ ಹಿಡಿದುಕೊಳ್ಳಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪರ ಅಲೆ ಇದೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್ ಪಕ್ಷದ ಶಾಸಕರನ್ನು ಭದ್ರ ಮಾಡಿಕೊಳ್ಳಲಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ನಾನು ಇಷ್ಟೇ ಸಲಹೆ ನೀಡಲು ಸಾಧ್ಯ ಎಂದರು.
ರಾಜ್ಯದ ಇತಿಹಾಸದಲ್ಲಿ 5 ವರ್ಷಗಳಲ್ಲಿ ಮುಖ್ಯಮಂತ್ರಿಯಾಗಿ ಅತಿ ಹೆಚ್ಚು ಸಾಲ ಮಾಡಿರುವ ಖ್ಯಾತಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರದ್ದು. ಕಳೆದ ಬಜೆಟ್ ಘೋಷಣೆಗಳ ಪೈಕಿ ಕೇವಲ 10ರಷ್ಟು ಕಾಮಗಾರಿಗಳು ಜಾರಿಯಾಗಿವೆ 3 ಲಕ್ಷ ಕೋಟಿ ಸಾಲ ಇದೆ ಎಂದಿರುವ ಬಜೆಟ್‌ನಲ್ಲಿ ಎಷ್ಟು ಅನುಷ್ಠಾನಗೊಂಡಿದೆ ಎಂದು ವಿಧಾನಸಭೆಯಲ್ಲಿ ವರದಿ ನೀಡುತ್ತೇವೆ ಎಂದರು.