ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆ ಬಿಡುಗಡೆ

0
17

ಬೆಂಗಳೂರು: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಇಂದು ಮಂಗಳವಾರ ಬಿಡುಗಡೆಯಾಗಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ, ಡಾ ಜಿ ಪರಮೇಶ್ವರ್ ಮೊದಲಾದ ನಾಯಕರ ಸಮ್ಮುಖದಲ್ಲಿ ಬಿಡುಗಡೆಯಾಯಿತು. ವೀಳ್ಯದೆಲೆ ಅಡಿಕೆ, ಅರಿಶಿನ, ಕುಂಕುಮ ಇಟ್ಟು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಪ್ರಣಾಳಿಕೆ ಪುಸ್ತಕಕ್ಕೆ ಕನ್ನಡದ ಬಾವುಟದ ಬಣ್ಣ ಹಚ್ಚಿ ‘ಸರ್ವ ಜನಾಂಗದ ಶಾಂತಿಯ ತೋಟ,ಇದುವೆ ಕಾಂಗ್ರೆಸ್‌ ಬದ್ದತೆ’ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಕಾಂಗ್ರೆಸ್‌ ಬರಲಿದೆ ಪ್ರಗತಿ ತರಲಿದೆ ಎಂದು ಘೋಷ ವಾಕ್ಯವನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.

Previous articleಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ
Next articleನಾಗರೀಕರಿಗೆ ಬಿಜೆಪಿ 7 ಸುತ್ತಿನ ಭದ್ರತೆ ಕೋಟೆ