Home ತಾಜಾ ಸುದ್ದಿ ಕಾಂಗ್ರೆಸ್‌ ವಕ್ತಾರೆ ಭವ್ಯಾ ಈಗ ಭಾರತೀಯ ಸೇನೆಯ ಲೆಫ್ಟಿನೆಂಟ್‌

ಕಾಂಗ್ರೆಸ್‌ ವಕ್ತಾರೆ ಭವ್ಯಾ ಈಗ ಭಾರತೀಯ ಸೇನೆಯ ಲೆಫ್ಟಿನೆಂಟ್‌

0

ಕರ್ನಾಟಕ ಕಾಂಗ್ರೆಸ್ ವಕ್ತಾರೆ ಭವ್ಯಾ ನರಸಿಂಹಮೂರ್ತಿ ಅವರು ದಕ್ಷಿಣ ಭಾರತದಿಂದ ಪ್ರಾದೇಶಿಕ ಸೇನೆಗೆ ಆಯ್ಕೆಯಾದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿರುವ ಭವ್ಯ ನರಸಿಂಹಮೂರ್ತಿ ಅವರು 2022ನೇ ಸಾಲಿನ ಪರೀಕ್ಷೆಯಲ್ಲಿ ಆಯ್ಕೆಯಾದ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿದ್ದಾರೆ. ಕಾಶ್ಮೀರದಲ್ಲಿ ಭಾರತ ಪಾಕಿಸ್ಥಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ ತರಬೇತಿ ಪಡೆದು ಲೆಫ್ಟಿನಂಟ್ ಆಗಿ ನಿಯೋಜನೆಗೊಂಡಿದ್ದಾರೆ.

Exit mobile version