ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಆಯ್ಕೆ

0
17

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಸಿದ್ದರಾಮಯ್ಯ ಅವರೇ ನಮ್ಮ ನಾಯಕ ಎಂದು ಘೋಷಣೆ ಮಾಡಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಹೆಸರನ್ನು ಪ್ರಸ್ತಾಪಿಸಿದರು. ಇದಕ್ಕೆ ಶಾಸಕರೆಲ್ಲರೂ ಸಹಮತ ಸೂಚಿಸಿದ
ಸಿದ್ದರಾಮಯ್ಯ ನಮ್ಮ ನಾಯಕನೆಂದು ಘೋಷಣೆ ಮಾಡಲಾಯಿತು. ಶಾಸಕಾಂಗ ನಾಯಕನ ಆಯ್ಕೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನಿರ್ಣಯ ಮಂಡಿಸಿದರು. ನೆರೆದಿದ್ದ ಎಲ್ಲ 135 ಶಾಸಕರು ಕೂಡ ಅಧ್ಯಕ್ಷರ ನಿರ್ಣಯಕ್ಕೆ ಅನುಮೋದನೆ ನೀಡಿದರು.

Previous articleಅರಸಿಕೆರೆ-ಹುಬ್ಬಳ್ಳಿ ರೈಲು ಭಾಗಶಃ ರದ್ದು
Next articleಪೂರ್ವದ್ವೇಷ: ಯುವಕನ ಕೊಲೆ