ಕಾಂಗ್ರೆಸ್ ‌ಸರ್ಕಾರದ ದುಬಾರಿ ದುನಿಯಾ ಸೃಷ್ಟಿ

0
18
ಬಸವರಾಜ

ಬೆಂಗಳೂರು: ಕಾಂಗ್ರೆಸ್ ‌ಸರ್ಕಾರದ ದುಬಾರಿ ದುನಿಯಾ ಸೃಷ್ಟಿ ಆಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ, ಬೆಲೆ ಏರಿಕೆ ಕುರಿತು ಟ್ವೀಟ್‌ ಮಾಡಿರುವ ಅವರು ಕಾಂಗ್ರೆಸ್‌ ಸರಕಾರದ ಆರನೇ ಗ್ಯಾರೆಂಟಿ ಎಂದಿದ್ದಾರೆ, ಅವರು ತಮ್ಮ ಟ್ವೀಟ್‌ನಲ್ಲಿ “ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಎಲ್ಲ ವಸ್ತುಗಳ ಬೆಲೆಗಳ ಏರಿಕೆಯ ಗ್ಯಾರೆಂಟಿ.
೧) ವಿದ್ಯುತ್ ದರ ಏರಿಕೆಯ ಶಾಕ್.
೨) ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ.
೩) ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ.
೪) ಹೊಟೆಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಕೆ.
೫) ಬಜೆಟ್ ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ.
೬) ಮೋಟರ್ ವೆಹಿಕಲ್ ತೆರಿಗೆ ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ ಹೆಚ್ಚಳ ಮೂಲಕ ಬರುವಂತ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆ.
ಇದು ಕಾಂಗ್ರೆಸ್ ‌ಸರ್ಕಾರದ ದುಬಾರಿ ದುನಿಯಾ ಸೃಷ್ಟಿ.
ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ” ಎಂದಿದ್ದಾರೆ.

Previous articleನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ ಪ್ರದಾನ
Next articleಹೀರೋ ಮೋಟೋಕಾರ್ಪ್ ಅಧ್ಯಕ್ಷರ ಮನೆ ಮೇಲೆ ಇ.ಡಿ ದಾಳಿ