ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಅವರ ಮಗ ಅನಿಲ್ ಆಂಟನಿ ಅವರು ಗುರುವಾರ ಬಿಜೆಪಿ ಸೇರ್ಪಡೆಯಾದರು. ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ವಿಚಾರವಾಗಿ ಪಕ್ಷದ ನಿಲುವನ್ನು ಟೀಕಿಸಿದ್ದ ಅನಿಲ್ ಆಂಟನಿ ಅವರು, ಜನವರಿಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ಅಂದಿನಿಂದಲೂ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ನಿರೀಕ್ಷೆ ವ್ಯಕ್ತವಾಗಿತ್ತು.
ದೆಹಲಿಯ ಬಿಜೆಪಿ ಆಸ್ಥಾನಕ್ಕೆ ಆಗಮಿಸಿದ ಅನಿಲ್ ಆಂಟನಿ ಪಕ್ಷದ ಸದಸ್ಯತ್ವವನ್ನು ಸ್ವೀಕರಿಸಿದರು. ಕೇಂದ್ರ ಸಚಿವ ಪಿಯೂಷ್ ಗೋಯಲ ಅನಿಲ್ ಆಂಟನ್‌ಗೆ ಬಿಜೆಪಿಯ ಸದಸ್ಯತ್ವ ನೀಡಿದ್ದಾರೆ. ಇದಕ್ಕಿಂತ ಮೊದಲು ಅನಿಲ್, ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿದ್ದರು. ಅನಿಲ್ ಆಂಟನಿ ಅವರು ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ವಿ ಮುರಳೀಧರನ್ ಅವರ ಸಮ್ಮುಖದಲ್ಲಿ ಕಮಲ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾದರು.