ಕಾಳಜಿಯ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ

0
10
ಸಿದ್ದರಾಮಯ್ಯ

ಬೆಂಗಳೂರು: ಕಾಳಜಿಯ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಿ.ಟಿ.ಸಿ.ಎಲ್ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರೊಂದಿಗೆ ಸಭೆ ನಡೆಸಿದ ಅವರು ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಯ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ.
ದಲಿತರ ಜಮೀನು ಹಕ್ಕು ಕಾಪಾಡುವ ನಿಟ್ಟಿನಲ್ಲಿ ಪಿ.ಟಿ.ಸಿ.ಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಕುರಿತ ಸರ್ಕಾರದ ನಿಲುವನ್ನು ಆಯವ್ಯಯದಲ್ಲಿಯೂ ಸ್ಪಷ್ಟಪಡಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಇಂದು ಸಭೆ ಕರೆಯಲಾಗಿದೆ. ಮತ್ತೆ ಮತ್ತೆ ಯಾವುದೇ ವಿವಾದ ಇರಬಾರದು, ಪಿ.ಟಿ.ಸಿ.ಎಲ್ ಕಾಯ್ದೆಯ ಉದ್ದೇಶ ಪರಿಣಾಮಕಾರಿಯಾಗಿ ಈಡೇರಬೇಕು, ಭೂಮಿ ಕಳೆದುಕೊಂಡವರಿಗೆ ನ್ಯಾಯಾಲಯದಲ್ಲಿ ಹಿನ್ನಡೆ ಆಗಬಾರದು ಎನ್ನುವ ಉದ್ದೇಶದಿಂದ ಈ ಬಗ್ಗೆ ದಲಿತ ಮುಖಂಡರ ಮತ್ತು ನ್ಯಾಯವಾದಿಗಳ ಅಭಿಪ್ರಾಯ ಕೇಳಿದ್ದೇನೆ. ಕಾನೂನು ತಜ್ಞರ ಅಭಿಪ್ರಾಯವನ್ನೂ ಪಡೆದುಕೊಳ್ಳುತ್ತೇವೆ. ನಾವು ಮೊದಲೇ ಕೊಟ್ಟಿದ್ದ ಭರವಸೆಯಂತೆ ಈ ಸರ್ಕಾರದ ಮೊದಲನೆ ಅಧಿವೇಶನದಲ್ಲೇ ಪಿ.ಟಿ.ಸಿ.ಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ ಎಂದಿದ್ದಾರೆ.

Previous articleಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು
Next articleಸೇತುವೆ ಬಳಿ ಹಳೇ ಕಾಲದ ನಾಣ್ಯ ಪತ್ತೆ