Home Advertisement
Home ತಾಜಾ ಸುದ್ದಿ ಕಾವೇರಿ ಕಿಚ್ಚು: ಮಂಗಳವಾರ ಬೆಂಗಳೂರು ಬಂದ್

ಕಾವೇರಿ ಕಿಚ್ಚು: ಮಂಗಳವಾರ ಬೆಂಗಳೂರು ಬಂದ್

0
101

ಬೆಂಗಳೂರು: ಸೆಪ್ಟೆಂಬರ್‌ 26ರಂದು ಬೆಂಗಳೂರು ಬಂದ್‌ಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಸಂಘ ಕರೆ ನೀಡಿದೆ. ಕುರುಬೂರು ಶಾಂತಕುಮಾರ್‌ ನೇತೃತ್ವದ ಸಮಿತಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಭೆ ನಡೆಸಿದ ಬಳಿಕ ಅಧಿಕೃತ ನಿರ್ಧಾರ ಪ್ರಕಟಿಸಿದೆ. ಬೆಂಗಳೂರು ಮತ್ತು ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಬಂದ್‌ಗೆ ಕರೆ ನೀಡಲಾಗಿದೆ. ಅಂದು ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್ ನಿಂದ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ರ‍್ಯಾಲಿ ನಡೆಯಲಿದೆ ಎಂದು ಸಮಿತಿ ತಿಳಿಸಿದೆ. ರಾಜ್ಯ ಕಬ್ಬು ಬೆಳೆಗಾರರ ಸಂಘ, ಆಮ್ ಆದ್ಮಿ ಪಕ್ಷ, ಕನ್ನಡ ಚಳುವಳಿ ಕೇಂದ್ರ ಸಮಿತಿ, ಜಯಕರ್ನಾಟಕ ಸಂಘಟನೆ, ತಲಕಾಡು ಸಂಶೋಧಕರ ಸಂಘ, ರಾಷ್ಟ್ರೀಯ ಚಾಲಕರ ಒಕ್ಕೂಟ, ಕನ್ನಡಪರ ಹೋರಾಟಗಾರರ ಸಂಘ, ಬಿಬಿಎಂಪಿ ನೌಕರರ ಕ್ಷೇಮಾಭಿವೃದ್ಧಿ ಸಂಘ, ತಮಿಳುಸಂಘ, ಕೆಂಪೇಗೌಡ ಸಮಿತಿ, ರಾಜಸ್ಥಾನಿ ಭಾಷಿಕರ ಸಂಘ, ಕರ್ನಾಟಕ ರಕ್ಷಣಾ ಸೇನೆ ಸೇರಿದಂತೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಗಳೂರು ಬಂದ್‌ಗೆ ಬೆಂಬಲ ಸೂಚಿಸಿವೆ. ಕೈಗಾರಿಕೆಗಳು, ಐಟಿ ಕಂಪನಿಗಳು, ಕಾರ್ಮಿಕರು, ಕೈಗಾರಿಕೋದ್ಯಮಿಗಳು, ಸಾರ್ವಜನಿಕರು, ಶಾಲಾ, ಕಾಲೇಜುಗಳ ಮುಖ್ಯಸ್ಥರು ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿ ಕೂಡ ಬೆಂಬಲ ನೀಡಬೇಕು. ಸ್ವಯಂ ಪ್ರೇರಿತವಾಗಿ ಬಂದ್‌ಗೆ ಬೆಂಬಲಿಸುಂತೆ ಸಂಘಟನೆಗಳು ಮನವಿ ಮಾಡಿದ್ದೇವೆ. ಅಲ್ಲದೇ ತುರ್ತಾಗಿ ವಿಶೇಷ ವಿಧಾನ ಮಂಡಲ ಅಧಿವೇಶನ ಕರೆಯಬೇಕು. ಕಾವೇರಿ ವಿಚಾರವಾಗಿ ಸಂಕಷ್ಟ ಸೂತ್ರದ ಬಗ್ಗೆ ಚರ್ಚೆ ಆಗಬೇಕು ಎಂದು ಆಗ್ರಹಿಸಿವೆ.

Previous articleಧಾರವಾಡ: “ನನ್ನ ಮಣ್ಣು ನನ್ನ ದೇಶ” ಅಭಿಯಾನಕ್ಕೆ ಚಾಲನೆ 
Next articleಪರಶುರಾಮ ಥೀಮ್‌ ಪಾರ್ಕ್‌ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ