ಕಾವೇರಿ ನೀರು: ಕರ್ನಾಟಕಕ್ಕೆ ಶಾಕ್: ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸಲು ಆದೇಶ

0
21

ನವದೆಹಲಿ: ಕಾವೇರಿ ನೀರು ಹರಿಸುವ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶ ಮತ್ತೆ ಕರ್ನಾಟಕಕ್ಕೆ ಶಾಕ್‌ ನೀಡಿದೆ. ತಮಿಳುನಾಡಿಗೆ 5000 ಕ್ಯೂಸೆಕ್​ ನೀರು ಹರಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ್ದು. CWMA ಆದೇಶ ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ, ಕಾವೇರಿ ನಿಯಂತ್ರಣ ಆಯೋಗ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶಗಳು ಮತ್ತು ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಲಾಗುವುದಿಲ್ಲ. ಎರಡು ಸಮಿತಿಗಳ ಆದೇಶವನ್ನು ಒಪ್ಪಬೇಕಾಗುತ್ತೆ. ಎರಡು ಸಮಿತಿಗಳ ಆದೇಶವನ್ನು ಕರ್ನಾಟಕ ಪಾಲಿಸಬೇಕು, ಹೀಗಾಗಿ ಕರ್ನಾಟಕ ನೀರು ಹರಿಸಲೇಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಮುಂದಿನ 15 ದಿನಗಳ ಕಾಲ ಪ್ರತಿದಿನ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸಲು ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ.

Previous articleನಮ್ಮೂರ ಮಹಾತ್ಮೆ
Next articleರೈಲ್ವೆ ಹಮಾಲಿಗಳನ್ನು ಭೇಟಿ ಮಾಡಿದ ರಾಹುಲ್