ಟೀಮ್ ಇಂಡಿಯಾದ ಮಾಜಿ ನಾಯಕ ಕಿಂಗ್ ಕೊಹ್ಲಿಯನ್ನು ಭೇಟಿಯಾಗಲು ಅಭಿಮಾನಿಗಳು ಹಾತೊರೆಯುತ್ತಾರೆ. ಹೀಗೆ ಎದುರಾಳಿ ತಂಡದ ಆಟಗಾರನ ತಾಯಿ ಕೊಹ್ಲಿಯನ್ನು ತಬ್ಬಿಕೊಂಡು ಮುತ್ತಿಟ್ಟು ಭಾವುಕರಾಗಿ ಕಣ್ಣೀರು ಸುರಿಸಿದ ಘಟನೆ ಇಂದು ನಡೆದಿದೆ.
ಟ್ರನಿಡಾಡ್‌ನ ಪೋರ್ಟ್ ಆಫ್ ಸ್ಮೇನ್‌ನಲ್ಲಿರುವ ಕ್ವೀನ್ಸ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದ ಎರಡನೇ ದಿನದಾಟ ಮುಕ್ತಾಯದ ಬಳಿಕ ವೆಸ್ಟ್ ಇಂಡೀಸ್ ವಿಕೆಟ್ ಕೀಪರ್ ಜೋಶುವಾ ಡಿ ಸಿಲ್ವಾ ಅವರ ತಾಯಿ ಕೊಹ್ಲಿಯನ್ನು ಭೇಟಿಯಾಗಿದ್ದಾರೆ. ಈ ವೇಳೆ ಕೊಹ್ಲಿಯನ್ನು ಅಪ್ಪಿಕೊಂಡು, ಕೆನ್ನೆಗೆ ಮುತ್ತುಕೊಟ್ಟರು. ಬಳಿಕ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.