Home ತಾಜಾ ಸುದ್ದಿ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ

ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ

0

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಬುಧವಾರ ಎರಡನೇ ದಿನವೂ ಸಂಜೆ ವೇಳೆ ಮಳೆಯಾಯಿತು.
ಮಂಗಳವಾರಕ್ಕಿಂತ ಮಳೆ ಅಲ್ಪ ಬಿರುಸು ಪಡೆದಿತ್ತು. ಸುಮಾರು ಅರ್ಧ ತಾಸಿಗೂ ಅಧಿಕ ಸಮಯ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯ, ಐನೆಕಿದು, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬಳ್ಪ ಸೇರಿದಂತೆ ಪರಿಸರದ ಅಲ್ಲಲ್ಲಿ ಸಾಧಾ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದೆ ಗರಿಷ್ಠ ತಾಪಮಾನ ದಾಖಲಾಗಿತ್ತು.

Exit mobile version