ಮಾಜಿ ಸಂಸದ ಶಿಗ್ಗಾಂವಿಯ ಮಂಜುನಾಥ್ ಕುನ್ನೂರು, ಕೆ.ಆರ್ ಪೇಟೆ ಜೆಡಿಎಸ್ ಮುಖಂಡ ದೇವರಾಜ್ ಇಂದು ಕಾಂಗ್ರೆಸ್ ಸೇರ್ಪಡೆಯಾದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಇವರೊಂದಿಗೆ ಚಿಂತಾಮಣಿ ಕಾಂಗ್ರೆಸ್ ಅಭ್ಯರ್ಥಿ ಡಾ. ಎಂ.ಸಿ ಸುಧಾಕರ್ ಅವರು 100ಕ್ಕೂ ಹೆಚ್ಚು ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಗೊಂಡರು.