ಕೆರೆ ಒತ್ತುವರಿ ಕುರಿತು ನ್ಯಾಯಾಂಗ ತನಿಖೆ: ಸಿಎಂ

0
28
ಕೆರೆ ಒತ್ತುವರಿ

ಬೆಂಗಳೂರಿನಲ್ಲಿ ನಡೆದಿರುವ ಕೆರೆಗಳ ಒತ್ತುವರಿ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ವಿಧಾನಸಭೆಯಲ್ಲಿ ಅತಿವೃಷ್ಟಿ ಮತ್ತು ಪ್ರವಾಹದ ಕುರಿತು ಕಂದಾಯ ಸಚಿವ ಆರ್‌. ಅಶೋಕ ಅವರು ಉತ್ತರ ನೀಡುವಾಗ ಮಧ್ಯ ಪ್ರವೇಶಿಸಿ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ಯಾವ ಕೆರೆಯನ್ನು? ಯಾವ ಕಾಲದಲ್ಲಿ ಮುಚ್ಚಲಾಗಿದೆ? ಎಂಬುದನ್ನು ತನಿಖೆ ನಡೆಸುತ್ತೇವೆ. ಒತ್ತುವರಿಗೆ ಕಾರಣವಾದವರು ಯಾರು? ಕೆರೆಗಳನ್ನು ಮುಚ್ಚಿ ನಿರ್ಮಿಸಿದ ಆಸ್ತಿಗಳ ಬೇನಾಮಿ ಮಾಲೀಕರು ಯಾರು? ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುವುದು. ಅಲ್ಲದೇ ಕೆರೆಗಳ ಕಣ್ಮರೆಗೆ ಕಾರಣವಾಗಿರುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.

Previous articleಒಂದಲ್ಲಾ ಒಂದು ದಿನ ನಾನು ನಿರಪರಾಧಿ ಎಂದು ಸಾಬೀತಾಗುತ್ತದೆ: ಡಿಕೆಶಿ
Next articleಉದಾರತೆ ಎಂದರೆ ಇದು