Home ತಾಜಾ ಸುದ್ದಿ ಕೇಂದ್ರ ಬಿಜೆಪಿ ವಿರುದ್ಧ ಹರಿಹಾಯ್ದ ಲಾಡ್

ಕೇಂದ್ರ ಬಿಜೆಪಿ ವಿರುದ್ಧ ಹರಿಹಾಯ್ದ ಲಾಡ್

0

ಹುಬ್ಬಳ್ಳಿ: ಅಧಿಕಾರಕೋಸ್ಕರ ಸರ್ಕಾರವನ್ನು ಬಿಳಿಸುವ ಪ್ರವೃತ್ತಿ ಹೊಂದಿದ ಬಿಜೆಪಿಗೆ, ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಮೋದಿ ಅವರು, ಕಳೆದ ೧೦ ವರ್ಷದಿಂದ ರಾಜ್ಯಕ್ಕೆ ಎಷ್ಟು ಅನುದಾನ ನೀಡಿದ್ದಾರೆ ಹಾಗೂ ರಾಜ್ಯ ಸರ್ಕಾರ ಎಷ್ಟು ಅಭಿವೃದ್ಧಿ ಮಾಡಿದೆ ಎಂಬುವುದು ಎಲ್ಲರಿಗೂ ಗೊತ್ತಿದೆ ಎಂದು ವ್ಯಂಗ್ಯವಾಡಿದರು.
ಮಧ್ಯಪ್ರದೇಶದಲ್ಲಿ ವ್ಯಾಪಂ ಹಗರಣ, ಪ್ರಧಾನ ಮಂತ್ರಿ ಆರೋಗ್ಯ ಹಗರಣ ಹಾಗೂ ರಾಮ ಮಂದಿರ ಅವ್ಯವಹಾರದಲ್ಲಿ ಭಾಗಿಯಾದ ಪ್ರಧಾನಿ ಮೋದಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು. ವ್ಯಾಪಂ ಹಗರಣದಲ್ಲಿ ೪೮ ಅಪರಾಧಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದರು.
ಕೇಶ್ವಾಪುರ ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಈಗಾಗಲೇ ಠಾಣಾಧಿಕಾರಿ ಸೇರಿದಂತೆ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ. ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು ತನಿಖೆಯಿಂದ ಸತ್ಯಾಸತ್ಯತೆ ತಿಳಿಯಲಿದೆ ಎಂದರು.

Exit mobile version