ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಪ್ರತಿ ತಿಂಗಳು 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಸುತ್ತೇವೆ ಅಂತಾ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಫ್‌ಸಿಐ) ಒಪ್ಪಿಕೊಂಡು, ಈಗ ಕೇಂದ್ರ ಸರ್ಕಾರದ ಕೊಡದಂತೆ ತಡೆಹಿಡಿದಿದೆ. ಕೇಂದ್ರ ಸರ್ಕಾರ ಬಡವರ ವಿರೋಧಿ ಸರ್ಕಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಹಾಗೂ ಎಫ್‌ಸಿಐ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ 10 ಕೆಜಿ ಅಕ್ಕಿಯನ್ನು ಜುಲೈ 1 ರಿಂದ ವಿತರಣೆ ಮಾಡುವುದಾಗಿ ಕಾಂಗ್ರೆಸ್ ಸರ್ಕಾರ ಭರವಸೆ ನೀಡಿತ್ತು. ರಾಜ್ಯಕ್ಕೆ 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಸರಬರಾಜು ಮಾಡುವಂತೆ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ನೊಂದಿಗೆ ಮಾಡಿಕೊಂಡಿದ್ದ ಒಪ್ಪಂದವನ್ನು ಕೇಂದ್ರ ಸರ್ಕಾರ ಮುರಿದು ಬೀಳುವಂತೆ ಮಾಡಿದೆ. ಕೇಂದ್ರ ಸರ್ಕಾರ ಬಡವರ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಎಫ್‌ಸಿಐ ನಮ್ಮ ರಾಜ್ಯಕ್ಕೆ ಅಕ್ಕಿ ಕೊಡೋದಾಗಿ ಒಪ್ಪಿದ್ದರಿಂದ ನಾವು ಅಕ್ಕಿ ಜುಲೈ 1 ರಿಂದ ಕೊಡೋದಾಗಿ ಘೋಷಣೆ ಮಾಡಿದ್ವಿ. ಇವರ ಮೇಲೆ ನಂಬಿಕೆಯಿಟ್ಟು ಅಕ್ಕಿ ಕೊಡೋದಾಗಿ ಘೋಷಣೆ ಮಾಡಿದ್ದವು. ಈ ಕೇಂದ್ರ ಸರ್ಕಾರ ಈ ರೀತಿ ತೀರ್ಮಾನ ಮಾಡ್ತಿರೋದು ರಾಜಕೀಯ. ಈ ವಿಚಾರದಲ್ಲಿ ರಾಜಕೀಯ ಮಾಡಬಾರದಿತ್ತು. ಅಕ್ಕಿ ಇಟ್ಟುಕೊಂಡು ಕೊಡೋದಿಲ್ಲ ಅಂತಾ ಹೇಳ್ತಿರೋದು ಜನವಿರೋಧಿ ನೀತಿಯಾಗಿದೆ ಎಂದು ಆಕ್ರೋಶ ಹೊರಹಾಕಿದರು.