ಕಲಬುರಗಿ: ಸೇಡಂ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಶರಣ ಪ್ರಕಾಶ ಪಾಟೀಲ್ ಪರ 50 ಕೋಟಿ ರೂ. ಹಂಚಿಕೆ ಮಾಡಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ರಾಜಕುಮಾರ ಪಾಟೀಲ್ ತೇಲ್ಕೂರ ಆರೋಪಿಸಿದರು. ಗುರುವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಚುನಾವಣೆ ಫಲಿತಾಂಶ ಬಳಿಕ ಈ ಬಗ್ಗೆ ಕಾನೂನು ಹೋರಾಟ ಮುಂದುವರಿಯಲಿದೆ ಎಂದರು. ಒಂದು ಕಪ್ ಚಹಾ ಕುಡಿಯದ ಹಾಗೂ ಸ್ನೇಹಿತ ನೀಡಿದ ಕಾರ್‌ನಲ್ಲಿ ತಿರುಗುತ್ತಾರೆ. ಚುನಾವಣೆಯಲ್ಲಿ 50 ಕೋಟಿ ರೂ. ಖರ್ಚು ಮಾಡಿದ್ದಾರೆ. ಈ ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು. ಸಹರಾ ಲೇಔಟ್ ಹಗರಣದ ಬಗ್ಗೆ ದಾಖಲೆ ಸಮೇತ ಮಾಧ್ಯಮಗಳ ಮುಂದೆ ಬರಲಿದ್ದೇನೆ ಎಂದರು.