Home ತಾಜಾ ಸುದ್ದಿ ಖರ್ಗೆ ಆಯ್ಕೆಯಿಂದ ಪಕ್ಷಕ್ಕೆ ಆನೆಬಲ

ಖರ್ಗೆ ಆಯ್ಕೆಯಿಂದ ಪಕ್ಷಕ್ಕೆ ಆನೆಬಲ

0
zameer ahmad khan

ಹುಬ್ಬಳ್ಳಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆ ಯಶಸ್ವಿಯಾದ ಹಿನ್ನಲೆಯಲ್ಲಿ ಬಿಜೆಪಿ ಸಂಕಲ್ಪ ಯಾತ್ರೆ ಪ್ರಾರಂಭಿಸಿದೆ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಜೋಡೋ ಯಾತ್ರೆ ಐಸಿಹಾಸಿಕವಾಗಿದೆ. ಇದರಿಂದ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಗೊಳ್ಳುತ್ತಿದೆ. ಇದಕ್ಕೆ ಪರ್ಯಾಯವಾಗಿ ಬಿಜೆಪಿಯವರು ಜನಸಂಕಲ್ಪ ಯಾತ್ರೆ ಆರಂಭಿಸಿದ್ದಾರೆ. ಅಷ್ಟಿದ್ದರೆ ಜೋಡೋ ಯಾತ್ರೆ ಮೊದಲೆ ಮಾಡಬಹುದಿತ್ತು ಎಂದರು.
ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವುದರಿಂದ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ಅವರೊಬ್ಬ ಅನುಭವಿ ರಾಜಕಾರಣಿಯಾಗಿದ್ದು, ಅವರ ಮಾರ್ಗದರ್ಶನ ಪಕ್ಷಕ್ಕೆ ಅಗತ್ಯವಿತ್ತು ಎಂದು ಹೇಳಿದರು.

Exit mobile version