ಖಾಸಗಿ ಬಸ್‌ ಮಾಲೀಕರಿಗೆ ಎಚ್ಚರಿಕೆ

0
6

ಖಾಸಗಿ ಬಸ್ ಮಾಲೀಕರಿಗೆ ಸಾರಿಗೆ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ. ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವುದು ಕಂಡು ಬಂದಲ್ಲಿ ಕಾನೂನು ಕ್ರಮ ಜರಿಗಿಸಲಾಗುವುದೆಂದು ಅವರು ಹೇಳಿದ್ದಾರೆ.
ಗಣೇಶ ಹಬ್ಬದ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಂದ ಜನ ತಮ್ಮ ಊರಿನತ್ತ ಬರುತ್ತಾರೆ. ಇದೇ ಸಂದರ್ಭವನ್ನು ಬಳಸಿಕೊಂಡು ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದ ಅವರು, ಖಾಸಗಿ ಬಸ್​ಗಳು ರೂಟ್​ಗೆ ನಿಗದಿ ಪಡಿಸಿದ ದರವನ್ನಷ್ಟೇ ಪ್ರಯಾಣಿಕರಿಂದ ಪಡೆಯಬೇಕು. ಒಂದು ವೇಳೆ ಯಾರಾದರೂ ಹೆಚ್ಚಿನ ಪ್ರಮಾಣದಲ್ಲಿ ದರವನ್ನು ಪಡೆದರೆ, ಅಂತಹ ಬಸ್ ಮಾಲೀಕರ ಮೇಲೆ ಯಾವುದೇ ಮುಲಾಜಿಲ್ಲದೆ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

Previous articleವಿದ್ಯಾರ್ಥಿಗಳ ನಡುವೆ ಬಿಗ್ ಫೈಟ್
Next article2047ಕ್ಕೆ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಭಾರತ: ಮೋದಿ