ಗಂಧದ ಗುಡಿ ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ ಘೋಷಣೆ

0
37
GANDADA GUDI

ಬೆಂಗಳೂರು : ಮುಂದಿನ ಪೀಳಿಗೆಗೆ ನಿಸರ್ಗದ ಬಗ್ಗೆ ಜಾಗೃತಿ ಮೂಡಿಸಲು, ಅದರ ಸಂರಕ್ಷಣೆ ಮಾಡಲು ಪ್ರೇರಣೆ ನೀಡುವ ‘ಗಂಧದ ಗುಡಿ’ ಚಲನಚಿತ್ರಕ್ಕೆ ಸರ್ಕಾರ ತೆರಿಗೆ ವಿನಾಯ್ತಿಯನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.
ಅವರು ಇಂದು ಪುನೀತ್ ಪರ್ವ , ಗಂಧದ ಗುಡಿ ಪ್ರಿ ರಿಲೀಸ್ ಕಾರ್ಯಕ್ರಮದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಗಂಧದ ಗುಡಿ ಚಲನಚಿತ್ರ ನಿಸರ್ಗ ಮತ್ತು ಅದರ ರಕ್ಷಣೆ ಕುರಿತಾಗಿರುವ ಚಲನಚಿತ್ರವಾಗಿರುವುದರಿಂದ ಇಂದಿನ ಕಾಲದಲ್ಲಿ ನಿಸರ್ಗ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವುದು ಅತ್ಯಂತ ಅವಶ್ಯಕತೆ ಇದೆ ಎಂದರು.
ನವೆಂಬರ್ 1 ರಂದು ಅಪ್ಪುರವರಿಗೆ ಕರ್ನಾಟಕ ಶ್ರೇಷ್ಟ ಪ್ರಶಸ್ತಿಯಾಗಿರುವ ‘ಕರ್ನಾಟಕ ಪ್ರಶಸ್ತಿಯನ್ನು’ ಸರ್ಕಾರ ನೀಡುತ್ತಿದೆ. ವಿಧಾನಸೌಧದ ಮುಖ್ಯದ್ವಾರ ಮೆಟ್ಟಿಲುಗಳ ಮೇಲೆ ಮರಣೋತ್ತರವಾಗಿ ಕರ್ನಾಟಕ ಪ್ರಶಸ್ತಿ ನೀಡಿ ಗೌರವ ಸಲ್ಲಿಸಲಾಗುತ್ತಿದೆ. ಇದು ಎಲ್ಲ ಯುವಕರಿಗೂ ಪ್ರೇರಣೆಯಾಗುವಂತಹ ಒಂದು ಗೌರವ ಎಂದು ಭಾವಿಸುತ್ತೇನೆ. ಗಂಧದ ಗುಡಿ ಚಲನಚಿತ್ರ ಅತ್ಯಂತ ಯಶಸ್ವಿಯಾಗಲಿ. ಅದೇ ರೀತಿ ಪುನೀತ್ ಪರ್ವ ಕಾರ್ಯಕ್ರಮ ಕೂಡ ಯಶಸ್ವಿಯಾಗಲಿ. ಸುಮಾರು ಹತ್ತು ದಿನಗಳ ಕಾಲ ನಡೆಯುವ ಕರ್ನಾಟಕ ರತ್ನ ಸಮಾರಂಭದ ಸಂಭ್ರಮವೂ ಕೂಡ ಯಶಸ್ವಿಯಾಗಲಿ. ಈ ಕಾರ್ಯಕ್ರಮದ ಮೂಲಕ ಅಪ್ಪುವಿನ ಮೇಲಿನ ನಮ್ಮ ಪ್ರೀತಿ, ವಾತ್ಸಲ್ಯವನ್ನು ಸಮಸ್ತ ಕನ್ನಡ ನಾಡು ತೋರಿಸಿದಂತಾಗುತ್ತದೆ ಎನ್ನುವ ಆಶಾಭಾವನೆ ನನಗಿದೆ ಎಂದರು.

Previous articleಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಮಹಾಬಲೇಶ್ವರ ಆಯ್ಕೆ
Next article10 ಲಕ್ಷ ಸಿಬ್ಬಂದಿ ನೇಮಕಾತಿ ಅಭಿಯಾನಕ್ಕೆ ಚಾಲನೆ