ಬೆಳಗಾವಿ: ಗಣೇಶೋತ್ಸವ ಹಿನ್ನೆಲೆಯಲ್ಲಿ ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಣೇಶ ಮಂಡಳಗಳ ಸಭೆಗಳು ನಡೆಯುತ್ತಿವೆ. ಇಂದು ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗಣೇಶ ಮಂಡಳಗಳ ಮತ್ತು ಶಾಂತಿ ಸಮಿತಿ ಸಭೆ ನಡೆಯಿತು.
ಟಿಳಕವಾಡಿ ಪೊಲೀಸ್ ಇನ್ಸಪೆಕ್ಟರ್ ದಯಾನಂದ ಶೇಗುಣಸಿ ಅವರು ಗಣೇಶ ಹಬ್ಬದ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕೆಂದು ಕೇಳಿದರು.
ಗಣೇಶ ಹಬ್ಬದ ಹಿನ್ನೆಲೆಯಲ್ಲಿ ರಸ್ತೆ ಮಧ್ಯದಲ್ಲಿ ಬಿದ್ದಿರುವ ತೆಗ್ಗುಗುಂಡಿಗಳನ್ನು ಮುಚ್ಚುವ ಕೆಲಸ ಕೈಗೆತ್ತಿಕೊಳ್ಳಲಾಗಿದೆ ಎಂದು ಮಹಾನಗರ ಪಾಲಿಕೆಯ ನಗರ ಯೋಜನಾ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ ವಿಲಾಸ ಜೋಶಿ ತಿಳಿಸಿದರು. ನಗರಸೇವಕರಾದ ಅಭಿಜಿತ್ ಜವಳಕರ, ನಿತಿನ್ ಜಾಧವ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.