ಗಾಂಧಿ ಮರಿಮೊಮ್ಮಗ ತುಷಾರ್‌ ಗಾಂಧಿ ಅರೆಸ್ಟ್

ನವದೆಹಲಿ: ತುಷಾರ್ ಗಾಂಧಿ ಅವರು ಕ್ವಿಟ್ ಇಂಡಿಯಾ ದಿನದ ಸ್ಮರಣಾರ್ಥವಾಗಿ ಕ್ರಾಂತಿ ಮೈದಾನಕ್ಕೆ ತೆರಳುತ್ತಿದ್ದಾಗ ಮುಂಬೈನ ಸಾಂತಾಕ್ರೂಜ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ತುಷಾರ್ ಗಾಂಧಿ ಅವರು ಟ್ವಿಟರ್​​ನಲ್ಲಿ,​​”ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ, ನಾನು ಆಗಸ್ಟ್ 9ರಂದು ನಡೆದ ಕ್ವಿಟ್ ಇಂಡಿಯಾ ದಿನದ ನೆನಪಿಗಾಗಿ ಕ್ರಾಂತಿ ಮೈದಾನ ಮನೆಯಿಂದ ಹೊರಟಾಗ ಸಾಂತಾಕ್ರೂಜ್ ಪೊಲೀಸ್ ಬಂಧಿಸಿದ್ದಾರೆ. ಈ ದಿನದಂದೇ ನನ್ನನ್ನೂ ಬಂಧಿಸಿರುವುದು ನನಗೆ ಹೆಮ್ಮೆ ಇದೆ” ಎಂದು ಟ್ವೀಟ್​​ ಮಾಡಿದ್ದಾರೆ.