ಗಾಣಗಾಪುರ ಸಮಗ್ರ ಅಭಿವೃದ್ಧಿಗೆ 67 ಕೋಟಿ ರೂ.ಗಳ ಡಿಪಿಆರ್ ಸಿದ್ಧ

0
31
ಗಾಣಗಾಪುರ

ಗಾಣಗಾಪುರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಚಿಂತನೆ ನಡೆಸಿದ್ದು, 67 ಕೋಟಿ ರೂ.ಗಳ ಡಿಪಿಆರ್ ಸಿದ್ಧ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 5 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಜಿಲ್ಲಾಡಳಿತ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದು, ಸುಮಾರು 60 ಕೋಟಿ ಗಿಂತ ಹೆಚ್ಚು ಅನುದಾನದ ಅಗತ್ಯವಿದೆ. ಕಾಶಿ ವಿಶ್ವನಾಥ, ಉಜ್ಜಯನಿಯ ಕಾಳಹಸ್ತಿಯಲ್ಲಿ ನಿರ್ಮಿಸಿರುವಂತೆ ಕಾರಿಡಾರ್ ನಿರ್ಮಿಸಬೇಕು ಎಂದು 67 ಕೋಟಿ ರೂ.ಗಳ ಡಿಪಿಆರ್ ಸಿದ್ಧ ಮಾಡಿದ್ದಾರೆ. ಬರುವ ಬಜೆಟ್‌ನಲ್ಲಿ ಸರ್ಕಾರ ಕಾರಿಡಾರ್ ನಿರ್ಮಾಣಕ್ಕೆ ಎಲ್ಲ ಕ್ರಮ ಕೈಗೊಳ್ಳಲಿದೆ ಎಂದರು.

Previous articleತೊಗರಿ ಬೆಳೆಗಾರರ ಸಂಕಷ್ಟಕ್ಕೆ ಸರ್ಕಾರದ ಸ್ಪಂದನೆ: ಇಂದು ಸಂಜೆ ಪರಿಹಾರ ಘೋಷಣೆ
Next articleಬಿಜೆಪಿಗೆ ಅಭಿವೃದ್ಧಿ ಎಂಬುವುದೇ ಗೊತ್ತಿಲ್ಲ: ಅಬ್ಬಯ್ಯ