ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ

0
47
ಸಿದ್ದು

ಬೆಂಗಳೂರು: ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಬಿ.ವಿ. ಗೋಪಾಲರೆಡ್ಡಿ ಅವರ ನೇತೃತ್ವದ ನಿಯೋಗ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ವಿದ್ಯುತ್ ದರ ಏರಿಕೆ ನಡುವೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಭಾರೀ ಕೈಗಾರಿಕೆಗಳ ವಿದ್ಯುತ್ ಬಳಕೆ ಮೇಲೆ ಶೇ. 9ರಷ್ಟು ವಿದ್ಯುತ್ ತೆರಿಗೆ ವಿಧಿಸಲಾಗುತ್ತಿದ್ದು, ಇದನ್ನು ಶೇ.3ಕ್ಕೆ ಇಳಿಸಬೇಕು ಎಂದು ಮನವಿ ಮಾಡಿದೆ.
ಈ ವೇಳೆ ಮಾತನಾಡಿದ ಸಿಎಂ ನಮ್ಮ ಸರ್ಕಾರ ವಿದ್ಯುತ್ ಶುಲ್ಕವನ್ನು ಏರಿಸುವ ನಿರ್ಧಾರ ಮಾಡಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೆಇಆರ್‌ಸಿ ಬೆಲೆ ಹೆಚ್ಚಳದ ನಿರ್ಧಾರ ಕೈಗೊಂಡಿತ್ತು. ಈ ಕುರಿತಂತೆ ಆರ್ಥಿಕ, ಇಂಧನ ಇಲಾಖೆ, ಕಾಸಿಯಾ, ಎಫ್‍ಕೆಸಿಸಿಐ ಅವರೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದರು.

Previous articleನಾನೇ ಗೃಹಲಕ್ಷ್ಮೀ ಹೋಲ್ಡ್ ಮಾಡಿಸಿದ್ದೇನೆ
Next articleನೂತನ ಶಾಸಕರಿಗೆ ತರಬೇತಿ: ಪೂರ್ವಾಗ್ರಹ ಪೀಡಿತ ಚರ್ಚೆ ಸರಿಯಲ್ಲ