ಗೃಹಲಕ್ಷ್ಮೀ ಯೋಜನೆಯಿಂದ 1.28 ಕೋಟಿ ಕುಟುಂಬಗಳಿಗೆ ಲಾಭ

0
11

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಿಂದ 1.28 ಕೋಟಿ ಕುಟುಂಬಗಳಿಗೆ ಲಾಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ, ಗೃಹಲಕ್ಷ್ಮಿ ಯೋಜನೆಯ ಕುರಿತು ಸುದ್ದಿಗೊಷ್ಠಿ ನಂತರ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿರುವ ಅವರು “ಮನೆ ಯಜಮಾನಿಗೆ 2000 ರೂ ನೀಡುವ ಗೃಹ ಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ದಿನಾಂಕ ನಿಗದಿಯಾಗಿದ್ದು, ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು. ಗೃಹ ಲಕ್ಷ್ಮೀ ಯೋಜನೆಗೆ ಜುಲೈ 19ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ರಾಷ್ಟ್ರೀಯ ನಾಯಕರನ್ನು ಕರೆಸಿ ಯೋಜನೆಗೆ ಚಾಲನೆ ನೀಡುವ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕರ್ನಾಟಕ ಒನ್, ಗ್ರಾಮ್ ಒನ್, ಬಾಪೂಜಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಕೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಗೃಹಲಕ್ಷ್ಮೀ ಯೋಜನೆಯಿಂದ 1.28 ಕೋಟಿ ಕುಟುಂಬಗಳಿಗೆ ಲಾಭವಾಗಲಿದೆ. ಜಿ ಎಸ್ ಟಿ ಮತ್ತು ಆದಾಯ ತೆರಿಗೆ ಪಾವತಿಸುವವರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ. ಏನಾದರೂ ಗೊಂದಲವಿದ್ದರೆ 8147500500 ಮೊಬೈಲ್ ಸಂಪರ್ಕಿಸಬಹುದು. ಅರ್ಜಿ ಫಾರ್ಮ್ ತುಂಬಲು ನೆರವಾಗಲು ಪ್ರಜಾ ಪ್ರತಿನಿಧಿಗಳನ್ನು ನೇಮಕ ಮಾಡಲಾಗುವುದು. ಅವರಿಗೆ ಯಾವುದೇ ರೀತಿಯ ಹಣ ನೀಡಬಾರದು. ಸರಕಾರವೇ ಅವರಿಗೆ ಹಣ ನೀಡಲಿದೆ. ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Previous articleಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಬಹುದು
Next articleಖ್ಯಾತ ನಟ ರವೀಂದ್ರ ಮಹಾಜನಿ ಆತ್ಮಹತ್ಯೆ