ಘಮಂಡಿಯಾ ಘಟಬಂಧನ ಉಳಿಸಲು ತಮಿಳುನಾಡಿಗೆ ನೀರು

0
8
ಕೇಂದ್ರ ಸಚಿವ ಜೋಶಿ ಆಕ್ಷೇಪ

ಧಾರವಾಡ: ಘಮಂಡಿಯಾ ಘಟಬಂಧನ ಉಳಿಸಲು ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರನ್ನು ತಮಿಳುನಾಡಿಗೆ ಬಿಟ್ಟ ವಿಚಾರವಾಗಿ ಮಾತನಾಡಿ, ಘಮಂಡಿಯಾ ಘಟಬಂಧನ ಉಳಿಸಲು ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ರಾಜ್ಯದ ಹಿತಾಸಕ್ತಿ ಬಲಿಕೊಟ್ಟು ಈಗ ಕೋರ್ಟ್ಗೆ ಹೋಗಿದ್ದಾರೆ. ಮೋದಿಯವರನ್ನು ಸೋಲಿಸುವ ಷಡ್ಯಂತ್ರ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜನರು ಮೋದಿಯವರನ್ನು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಭಾರತ್ ಹೆಸರಿನ ಕುರಿತು ಕೇಂದ್ರ ಸರ್ಕಾರದ ವಕ್ತಾರರು ಈಗಾಗಲೇ ಸ್ಪಷ್ಟ ಪಡಿಸಿದ್ದಾರೆ. ಭಾರತ ಎನ್ನುವವರು ಭಾರತ ಎನ್ನಲಿ, ಇಂಡಿಯಾ ಎನ್ನುವವರು ಇಂಡಿಯಾ ಎನ್ನಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಹುಬ್ಬಳ್ಳಿ ಚನ್ನಮ್ಮ ವೃತ್ತದ ಬಳಿ ಇರುವ ಪಾಲಿಕೆ ಜಾಗದಲ್ಲಿ (ಈದ್ಗಾ ಮೈದಾನ) ಗಣೇಶೋತ್ಸವ ಆಚರಣೆ ವಿಚಾರವಾಗಿ ಮಾತನಾಡಿ, ಪಾಲಿಕೆ ಜಾಗ (ಈದ್ಗಾ ಮೈದಾನ) ಯಾವುದೇ ಒಂದು ಸಮುದಾಯಕ್ಕೆ ಸೇರಿದ್ದಲ್ಲ. ಮೈದಾನ ಪಾಲಿಕೆಯ ಆಸ್ತಿ, ಗಣೇಶ ಮೂರ್ತಿ ಇಡಲು ಪಾಲಿಕೆ ಅನುಮತಿ ಬೇಕು. ಕಳೆದ ವರ್ಷ ಕೋರ್ಟ್ ಆದೇಶದಂತೆ ಅನುಮತಿ ನೀಡಲಾಗಿದೆ ಎಂದರು.
ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಸರ್ಕಾರ ಯಾವತ್ತೂ ಸ್ಥಿರವಲ್ಲಿ. ಪೊಲೀಸರು ಬಿಜೆಪಿ ಕಾರ್ಯಕರ್ತರ ಮೇಲೆ ದೌರ್ಜನ್ಯ ನಿಲ್ಲಿಸಬೇಕು. ರಾಜಕಾರಣಿಗಳ ಮಾತು ಕೇಳಿ ಕೇಸ್ ಹಾಕಬಾರದು. ಬಿಜೆಪಿ ಹೋರಾಟದಿಂದಲೇ ಮೇಲೆ ಬಂದ ಪಕ್ಷ. ಪೊಲೀಸರ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.

Previous articleತಮಿಳುನಾಡಿಗೆ ನೀರು: ಒಣಗಿದ‌ ಕಬ್ಬಿನ ಜೊಲ್ಲೆ ಹಿಡಿದು ಪ್ರತಿಭಟನೆ
Next articleಯಾರು ಯಾರ ಜೊತೆ ಮೈತ್ರಿ ಮಾಡಬೇಕು ಎಂದು ಅವರಿಗೆ ಬಿಟ್ಟಿದ್ದು