ಚುನಾವಣಾಧಿಕಾರಿ ಕಾರು ಅಡ್ಡಗಟ್ಟಿ, ದೋಚಿದ ದುಷ್ಕರ್ಮಿಗಳು

0
24

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಂಘದ ಚುನಾವಣೆಗೆ ತೆರಳುತ್ತಿದ್ದ ಚುನಾವಣಾ ಅಧಿಕಾರಿಗಳ ಕಾರನ್ನು ಅಡ್ಡಗಟ್ಟಿ ಅವರ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು ಚುನಾವಣಾ ಪರಿಕರಗಳನ್ನು ದೋಚಿ ಪರಾರಿ ಆಗಿದ್ದಾರೆ. ಈ ಘಟನೆಯು ಮಾಗಡಿ ಕುಣಿಗಲ್ ರಸ್ತೆಯಲ್ಲಿ ನಡೆದಿದೆ.
ಈ ಘಟನೆಯಿಂದ ಇಂದು ಬೆಳಗ್ಗೆ ನಡೆಯಬೇಕಿದ್ದ ಹೆಲ್ಲೇನಹಳ್ಳಿ ಹಾಲು ಉತ್ಪಾದಕರ ಸಹಾಕಾರ ಸಂಘದ ಚುನಾವಣೆ ತಾತ್ಕಾಲಿಕವಾಗಿ ಸ್ಥಗಿತವಾಗಿದೆ. ಈ ಘಟನೆಯು ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ, ಚುನಾವಣಾ ಸಿಬ್ಬಂದಿ ದೂರು ದಾಖಲಿಸಿದ್ದಾರೆ. ಪೊಲಿಸರು ಕೂಡ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Previous articleಮಥುರಾದಲ್ಲಿ ಟ್ರ್ಯಾಕ್‌ ಬಿಟ್ಟು ಪ್ಲಾಟ್‌ಫಾರ್ಮ್‌ ಮೇಲೆ ಹತ್ತಿದ ರೈಲು
Next articleಜೆಡಿಎಸ್‌-ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆ