ಚೆನ್ನಮ್ಮ ವೃತ್ತದಲ್ಲಿ ಬಿಗುವಿನ ವಾತಾವರಣ: ಬಿಗು ಬಂದೋಬಸ್ತ

0
19

ಬೆಳಗಾವಿ: ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಬೆಳಗಾವಿಯ ಚೆನ್ಬಮ್ಮ ವೃತ್ತದಲ್ಲಿ ನಿಗದಿಯಾಗಿದ್ದು, ಪ್ರತಿಭಟನೆ ಸಂದರ್ಭದಲ್ಲಿ ಯಾವುದೆ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಹೌದು,
ಕೇಂದ್ರ ಸರಕಾರದ ಅಕ್ಕಿ ಸರಕಾರ ಖಂಡಿಸಿ ಇಂದು ಬೆಳಗ್ಗೆ 11ಕ್ಕೆ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಕಾಂಗ್ರೆಸ್ ಭವನದಿಂದ ಮೆರವಣಿಗೆಯಲ್ಲಿ ಚೆನ್ನಮ್ಮ ವೃತ್ತಕ್ಕೆ ಬಂದು ಅಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಗುವುದು.
ಇದೇ ವೇಳೆ ವಿದ್ಯುತ್ ಬಿಲ್ ದುಪ್ಪಟ್ಟು ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ರಾಜ್ಯಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಒದಗಿಸದ ಕೇಂದ್ರದ ವಿರುದ್ಧ ಕಾಂಗ್ರೆಸ್, ವಿದ್ಯುತ್ ದರ ದುಪಟ್ಟು ಮಾಡಿದ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಚೆನ್ನಮ್ಮ ವೃತ್ತದಲ್ಲಿ ಅಖಾಡ ರೆಡಿಯಾಗಿದ್ದು, ಪ್ರತಿಭಟನಾಕಾರರು ಮುಖಾಮುಖಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Previous articleವೀಣಾ ಭಾರದ್ವಾಜ ಮಹಾಪೌರ, ಸತೀಶ ಹಾನಗಲ್ ಉಪಮಹಾಪೌರ ಅಂತಿಮ
Next articleಒತ್ತಡ, ಆಮಿಷ ಹೆಚ್ಚಾಗಿವೆ