ಚೈತ್ರಾ ಕುಂದಾಪುರ ಗ್ಯಾಂಗ್‍ನ ಅಭಿನವ ಹಾಲಶ್ರೀ ಅರೆಸ್ಟ್

0
12

ಚೈತ್ರಾ ಕುಂದಾಪುರ ಪ್ರಕರಣದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ಗ್ಯಾಂಗ್‍ನ ಎ3 ಆರೋಪಿ ಅಭಿನವ ಹಾಲಶ್ರೀಯನ್ನು ಸಿಸಿಬಿ ಒಡಿಸ್ಸಾದಲ್ಲಿ ಬಂಧಿಸಿದೆ. ವಿಜಯನಗರದ ಹಾಲಶ್ರೀ ಈ ವಂಚನೆ ಪ್ರಕರಣದ ಮೂರನೇ ಆರೋಪಿಯಾಗಿದ್ದು, ಪ್ರಕರಣದಲ್ಲಿ ಒಂದೂವರೆ ಕೋಟಿ ರೂಪಾಯಿ ಪಡೆದ ಆರೋಪ ಹಾಲಶ್ರೀ ಮೇಲಿದೆ. ಪ್ರಕರಣ ದಾಖಲಾದಾಗಿನಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಇದೀಗ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು, ಬೆಂಗಳೂರಿಗೆ ಕರೆತರಲಾಗುತ್ತಿದೆ. ಆರೋಪಿ ಬಂಧನಕ್ಕೆ ಸಿಸಿಬಿ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದರು. ಹೈದರಾಬಾದ್‍ನಲ್ಲಿ ಅಡಗಿದ್ದ ಮಾಹಿತಿ ಮೇರೆಗೆ ಅಲ್ಲಿಗೂ ಅಧಿಕಾರಿಗಳ ತಂಡವನ್ನು ಕಳುಹಿಸಲಾಗಿತ್ತು. ಅಲ್ಲದೇ ಸ್ವಾಮೀಜಿ ಆಪ್ತರ ತೀವ್ರ ವಿಚಾರಣೆ ಕೂಡ ನಡೆಸಲಾಗಿತ್ತು. ಇದೀಗ ಒಡಿಸ್ಸಾದ ಹೋಟೆಲ್ ಒಂದರಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

Previous article5 ದಿನದಲ್ಲಿ ದೇಶ ಬಿಟ್ಟು ಹೋಗಿ
Next articleಚಿಕ್ಕಮಗಳೂರ: ಗಗನ್ ಕಡೂರು ಕರೆತಂದು ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು