ದಾವಣಗೆರೆ: ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 9 ವರ್ಷದಲ್ಲಿ ಹಿಂದೆಂದೂ ಕಂಡಿರದಷ್ಟು ಅಭಿವೃದ್ಧಿ ಮಾಡಿದ್ದು, ರಾಜ್ಯದ ಬಿಜೆಪಿ ಸರ್ಕಾರವೂ ಸಹ ರಾಜ್ಯದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಜನಪರ ಆಡಳಿತ ನೀಡಿದೆ. ನಮ್ಮ ಅಭಿವೃದ್ಧಿಯ ರಿಪೋರ್ಟ್ ಕಾರ್ಡ್ ಹಿಡಿದೇ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳು ಮತಯಾಚಿಸುತ್ತಿದ್ದು, ರಾಜ್ಯದ ಪ್ರಬುದ್ಧ ಜನರು ಬಿಜೆಪಿ ಪರ ಮತ ಚಲಾಯಿಸುವ ವಿಶ್ವಾಸವಿದೆ ಎಂದು ಅಸ್ಸಾಂ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಸರ್ಬಾನಂದ ಸೋನಾವಾಲ್ ವಿಶ್ವಾಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂಬತ್ತು ವರ್ಷದ ಬಿಜೆಪಿ ಆಡಳಿತದಲ್ಲಿ ದೇಶದ ಆರ್ಥಿಕತೆ ವಿಶ್ವದಲ್ಲಿ 11ರಿಂದ 5ನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಅಲ್ಲದೇ, ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯನ್ನು ನಮ್ಮ ಸರ್ಕಾರ ಒದಗಿಸಿರುವುದರಿಂದ ಜನರಿಗೆ ಬಿಜೆಪಿಯ ಬಗ್ಗೆ ವಿಶ್ವಾಸ ಮೂಡಿದೆ ಎಂದರು.
ಮೋದಿ ಸರ್ಕಾರ ಕಳೆದ 9 ವರ್ಷಗಳಲ್ಲಿ ಮೂಲಭೂತ ಸೌಲಭ್ಯ, ಸಂಪರ್ಕ ಹಾಗೂ ಸಾರಿಗೆಗೆ ಅತಿ ಹೆಚ್ಚಿನ ಆದ್ಯತೆ ನೀಡಿದೆ. ಮಹಿಳಾ ಸಬಲೀಕರಣಕ್ಕೆ ಪ್ರಾಮುಖ್ಯತೆ ನೀಡಿದ್ದು, ಜನಪರ, ರೈತಪರ ಮತ್ತು ಕಾರ್ಮಿಕರ ಪರವಾಗಿ ಆಡಳಿತ ನಡೆಸಿದೆ. ಇದಕ್ಕೆ ರಾಜ್ಯದ ಸರ್ಕಾರವೂ ಹೊರತಾಗಿಲ್ಲ. ಡಬಲ್ ಇಂಜಿನ್ ಸರ್ಕಾರಗಳಿದ್ದರೆ ಮಾತ್ರ ದೇಶ ಮತ್ತು ರಾಜ್ಯದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಬಿಜೆಪಿ ಜಿಲ್ಲಾ ಅಧ್ಯಕ್ಷ ವೀರೇಶ್ ಹನಗವಾಡಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಬಿ.ಜಿ. ಅಜಯ್ ಕುಮಾರ್, ಬಿಜೆಪಿ ಮುಖಂಡರಾದ ದೇವರಮನಿ ಶಿವಕುಮಾರ್, ಯಶವಂತರಾವ್ ಜಾಧವ್, ಬಿ.ಎಸ್. ಜಗದೀಶ್, ರಾಜನಹಳ್ಳಿ ಶಿವಕುಮಾರ್, ಆನಂದರಾವ್ ಶಿಂದೆ, ಅನಿತ್, ಸೋಗಿ ಶಾಂತಕುಮಾರ್, ಪ್ರಸನ್ನ ಕುಮಾರ್, ಡಿ.ಎಸ್. ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.