Home ತಾಜಾ ಸುದ್ದಿ ಜನರ ನಿರೀಕ್ಷೆಗಳನ್ನ ನಾವು ಉಳಿಸಿಕೊಳ್ಳಬೇಕು

ಜನರ ನಿರೀಕ್ಷೆಗಳನ್ನ ನಾವು ಉಳಿಸಿಕೊಳ್ಳಬೇಕು

0

ಬೆಂಗಳೂರು: ಜನ ಬದಲಾವಣೆ ಬಯಸಿ ನಮಗೆ ಅಧಿಕಾರ ಕೊಟ್ಟಿದ್ದಾರೆ. ಅವರ ನಿರೀಕ್ಷೆಗಳನ್ನ ನಾವು ಉಳಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಂಯ್ಯ ಹೇಳಿದರು, ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಮಳೆಗೆ ಪ್ರಾಣಹಾನಿ, ಆಸ್ತಿ ಹಾನಿಯಾಗಿದೆ. ಮುಂದಿನ ದಿನಗಳ ಇನ್ನು ಹೆಚ್ಚಿನ ಮಳೆಯಾಗಲಿದೆ. ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಹೆಚ್ಚಿನ ಸಮಯ ಇದ್ದು, ಜನರ ಸಮಸ್ಯೆಗಳನ್ನ ಆಲಿಸಬೇಕು ಎಂದು ಸೂಚಿಸಿದರು. ಜನ ಬದಲಾವಣೆ ಬಯಸಿ ನಮಗೆ ಅಧಿಕಾರ ಕೊಟ್ಟಿದ್ದಾರೆ. ಅವರ ನಿರೀಕ್ಷೆಗಳನ್ನ ನಾವು ಉಳಿಸಿಕೊಳ್ಳಬೇಕು. ಈಗಾಗಲೇ ಡಿಸಿಗಳಿಗೆ ಸೂಚನೆ ನೀಡಲಾಗಿದೆ. ರೈತರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿ ಕೊಳ್ಳಿ. ರಸ ಗೊಬ್ಬರ, ಬೀಜ ಎಲ್ಲವೂ ಸ್ಟಾಕ್ ಇದೆ, ಎಲ್ಲವನ್ನು ಬಳಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

Exit mobile version