ಜಾರಕಿಹೊಳಿ ಕುಟುಂಬ ಸರ್ಕಾರ ಉರುಳಿಸಿಲ್ಲ

0
26
ಸತೀಶ ಜಾರಕಿಹೊಳಿ

ಗೋಕಾಕ: ಇಡೀ ಜಾರಕಿಹೊಳಿ ಕುಟುಂಬ ಕೂಡಿ ಸರ್ಕಾರವನ್ನು ಉರುಳಿಸಿದ್ದಾರೆ ಎಂದು ಹೇಳಲಾಗಿದೆ. ಜಾರಕಿಹೊಳಿ ಕುಟುಂಬ ಕೂಡಿ ಯಾವುದೇ ರೀತಿ ಸರ್ಕಾರ ಉರುಳಿಸಿಲ್ಲ. ಇದರಲ್ಲಿ ನನಗೂ, ಬಾಲಚಂದ್ರ ಹಾಗೂ ಲಖನ್‌ಗೂ ಸಂಬಂಧವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರ ಬೀಳಿಸುವಲ್ಲಿ ಯಾರ ಪಾತ್ರವಿದೆಯೋ ಅವರಿಗೆ ಮಾತ್ರ ಆ ಮಾತು ಹೋಗಲಿ. ಅದನ್ನು ಬಿಟ್ಟು ಸರ್ಕಾರ ಬೀಳಿಸುವದರಲ್ಲಿ ಇಡೀ ಜಾರಕಿಹೊಳಿ ಕುಟುಂಬದ ಪಾತ್ರವಿದೆ ಎಂದು ಹೇಳುವುದು ಸರಿಯಲ್ಲ. ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತದೆ. ರಾಜ್ಯ ರಾಜಕಾರಣದಲ್ಲಿ ನಾಲ್ವರೂ ಸಹೋದರರು ಇದ್ದೇವೆ. ನಾಲ್ವರು ಒಂದೇ ಎಂದು ಭಾವಿಸಬೇಡಿ. ನಾಲ್ವರ ಕೆಲಸವೂ ಬೇರೆ ಬೇರೆ ಇದೆ. ಈ ಬಗ್ಗೆ ಯಾರಿಗೂ ಗೊಂದಲ ಬೇಡ ಎಂದು ಹೇಳಿದರು.

Previous article108 ಆಂಬ್ಯುಲೆನ್ಸ್ ಕರೆಗೆ ಪರ್ಯಾಯ ಕಂಟ್ರೋಲ್ ರೂಮ್ ಸ್ಥಾಪನೆ
Next articleಕರಾವಳಿ ಸ್ವಚ್ಛತಾ ಅಭಿಯಾನ ಮೋದಿ ಶ್ಲಾಘನೆ