ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ, ಹುಬ್ಬಳ್ಳಿ, ಕುಂದಗೋಳ, ಅಣ್ಣಿಗೇರಿ ತಾಲೂಕಿನಲ್ಲಿ ಮಳೆ ಸುರಿದಿದ್ದು, ಗುಡುಗು, ಸಿಡಿಲು, ಸಹಿತ ಬಿರುಸಇನ ಗಾಳಿಯೊಂದಿಗೆ ಮಳೆ ಸುರಿಯುತ್ತಿದೆ. ಕುಂದಗೋಳ ತಾಲೂಕಿನ ಯರೇಬೂದಿಹಾಳ ಗ್ರಾಮದಲ್ಲಿ ಸಂಜೆ 6.30ರ ಸುಮಾರು ನಾವಿ ಎಂಬುವರ ಮನೆ ಆವರಣದಲ್ಲಿನ ತೆಂಗಿನ ಗಿಡಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಅಕ್ಕಪಕ್ಕದ ನಿವಾಸಿಗಳೊಂದಿಗೆ ಬೆಂಕಿ ನಂದಿಸಿದ್ದಾರೆ. ಯಾವುದೇ ಅನಾಹುತವಾಗಿಲ್ಲ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.