ದೆಹಲಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ) 2023ರ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಭಾನುವಾರ ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ನಲ್ಲಿ ಪರೀಕ್ಷಿಸಬಹುದಾಗಿದೆ. ಹೈದರಾಬಾದಿನ ವಾವಿಲಾಲ ಚಿದ್ವಿಲಾಸ್ ರೆಡ್ಡಿ 341 ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನವನ್ನುಗಳಿಸಿದ್ದಾರೆ. ಈ ವರ್ಷ ಒಟ್ಟು 1,89,744 ಅಭ್ಯರ್ಥಿಗಳು ಜೆಇಇ ಅಡ್ವಾನ್ಸ್ಡ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪರೀಕ್ಷೆಯನ್ನು ಜೂನ್ 4ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಪೇಪರ್ 1 ಹಾಗೂ ಮಧ್ಯಾಹ್ನ 2:30ರಿಂದ ಸಂಜೆ 5:30ರವರೆಗೆ ಪೇಪರ್ 2 ಪರೀಕ್ಷೆಯನ್ನು ನಡೆಸಲಾಗಿತ್ತು.